ಫೆ. 14 : ಹರಿದ್ವಾರದಿಂದ ಕಾಪು ಹೊಸ ಮಾರಿಗುಡಿ ಸನ್ನಿಧಾನಕ್ಕೆ ಗಂಗಾಜಲ
Posted On:
11-02-2025 04:43PM
ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸದ ಪೂರ್ವಭಾವಿಯಾಗಿ ಫೆ.14 ರಂದು ಬೆಳಿಗ್ಗೆ 9:30 ಕ್ಕೆ ನವಕುಂಭಗಳಲ್ಲಿ ಗಂಗಾಜಲ ಆಗಮಿಸಲಿದೆ ಎಂದು ಗಂಗಾಜಲ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.
ಅವರು ಕಾಪು ಬ್ರಹ್ಮಕಲಶೋತ್ಸವ ಸಮಿತಿಯ ಕಚೇರಿಯಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಎಂ. ಆರ್ ಜಿ ಗ್ರೂಪ್ ಬೆಂಗಳೂರು ಇದರ ಚೇರ್ ಮ್ಯಾನ್ ಡಾ.ಕೆ. ಪ್ರಕಾಶ್ ಶೆಟ್ಟಿಯವರ ನೇತೃತ್ವದಲ್ಲಿ
ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರು ಹರಿದ್ವಾರದಲ್ಲಿ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ ಧಾರ್ಮಿಕ ವಿಧಿಗಳಿಂದ ಪೂಜಿಸಿ ಫೆ.14 ರಂದು ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಿದ್ದಾರೆ.
ತದನಂತರ ಗಂಗಾಜಲವನ್ನು ಶೋಭಾಯಾತ್ರೆಯ ಮೂಲಕ ಕಾಪು ಶ್ರೀ ಲಕ್ಷ್ಮಿಜನಾರ್ಧನ ದೇವರ ಸನ್ನಿಧಾನದಲ್ಲಿರಿಸಿ ಮುಂದಿನ 9 ದಿನ ವಿಶೇಷ ಪೂಜೆ ಸಲ್ಲಿಸಿ ತದನಂತರ ಹೊಸ ಮಾರಿಗುಡಿ ಸನ್ನಿಧಾನಕ್ಕೆ ತರಲಾಗುವುದು.
ಹರಿದ್ವಾರದಲ್ಲಿ ಗಂಗಾಜಲ ತರುವ ಸಂಧರ್ಭ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ದಂಪತಿಗಳು, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ದಂಪತಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಸೇರಿ ಒಟ್ಟು ಒಂಬತ್ತು ಜನರ ತಂಡ ಈ ಸಂಧರ್ಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರರಾದ ಯೋಗೀಶ್ ವಿ ಶೆಟ್ಟಿ ಬಾಲಾಜಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಾಧವ ಆರ್ ಪಾಲನ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಶೇಖರ ಸಾಲ್ಯಾನ್, ಗೀತಾಂಜಲಿ ಸುವರ್ಣ, ಕೆ. ವಿಶ್ವನಾಥ್, ಮನೋಹರ ರಾವ್, ಜಯಲಕ್ಷ್ಮಿಎಸ್. ಶೆಟ್ಟಿ, ಶಾಂತಲತಾ ಎಸ್.ಶೆಟ್ಟಿ, ಚರಿತ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.