ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುವಂತೆ ಧರ್ಮಸ್ಥಳದ ಧರ್ಮಾಧಿಕಾರಿಯವರಿಗೆ ಮನವಿ
Thumbnail
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5ರವರೆಗೆ ನವ ದಿನಗಳ ಪರ್ಯಂತ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಕ್ಷೇತ್ರದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರಿಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭ ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್.ಪಾಲನ್ ಹಾಗೂ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.
18 Feb 2025, 07:10 PM
Category: Kaup
Tags: