ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ.5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಕರ್ನಾಟಕ ಸರಕಾರದ ಮುಜರಾಯಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ ಹಾಗೂ ಸದಸ್ಯರಾದ ಮಾಧವ ಆರ್. ಪಾಲನ್ ಉಪಸ್ಥಿತರಿದ್ದರು.