ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ
Thumbnail
ಕಾಪು : ಸಂಪೂರ್ಣ ಶಿಲಾಮಯದೊಂದಿಗೆ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ ನೀಡಲಾಯಿತು. ಕೊರಂಗ್ರಪಾಡಿ ವೇದಮೂರ್ತಿ ಕೆ ಜಿ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ, ಕ್ಷೇತ್ರದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೆಪಿ. ಕುಮಾರ ಗುರು ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಸಹಕಾರದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಚಾಲನೆ ನೀಡಲಾಯಿತು. ಋತ್ವಿಜರ ಸ್ವಾಗತ, ಋತ್ವಿಗೊರಣ, ವಿಶ್ವಕರ್ಮ ಪೂಜೆ, ಗರ್ಭಗೃಹ ಪರಿಗ್ರಹ, ಸಾಮೂಹಿಕ ಫಲನ್ಯಾಸ, ಪ್ರಾರ್ಥನೆ ಆದ್ಯಶುದ್ಧಿ, ಪುಣ್ಯಾಹ ನಾಂದಿ, ಉಗ್ರಾಣ ಮಹೂರ್ತ, ಪಾಕಶಾಲಾ ಮುಹೂರ್ತ, ನೂತನ ಮಂದಿರ ಪ್ರವೇಶ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,  ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್,  ರಮೇಶ್‌ ಹೆಗಡೆ ಕಲ್ಯ, ಹೊರೆಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು, ರವಿ ಸುಂದರ ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್‌ ಕುಮಾರ್ ಶೆಟ್ಟಿ, ಭಗವಾನ್ ದಾಸ್ ಶೆಟ್ಟಿಗಾರ್,  ಸಂದೀಪ್ ಶೆಟ್ಟಿ ಮುಂಬಯಿ, ಮಾಧವ ಆರ್. ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Additional image Additional image Additional image
25 Feb 2025, 04:38 PM
Category: Kaup
Tags: