ಮಾಚ್೯ 21 : ಪಡುಬಿದ್ರಿಯಲ್ಲಿ ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ಟಾರ್ ನೃೆಟ್
Thumbnail
ಪಡುಬಿದ್ರಿ : ಪಡುಬಿದ್ರಿ ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ (ರಿ.) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20ನೇ ವರ್ಷದ "ಸ್ಟಾರ್ ನೃೆಟ್" ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಗಣ್ಯರು ಹಾಗು ಕನ್ನಡ ಮತ್ತು ತುಳು ಚಿತ್ರರಂಗದ ಖ್ಯಾತ ನಟ ನಟಿಯರು ಭಾಗವಹಿಸಲಿದ್ದು, ವಿವಿಧ ವಿಭಾಗದ ಸಾಧಕರಿಗೆ ಸನ್ಮಾನ ಮತ್ತು ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡದವರಿಂದ "ನೃತ್ಯ ವೃೆಭವ" ಹಾಗು ಕೇರಳ ಮತ್ತು ಜಿಲ್ಲೆಯ ಸುಪ್ರಸಿದ್ಧ ಸಂಗೀತಾ ಕಲಾವಿದರನ್ನು ಒಳಗೊಂಡ ಶಶಿ ಮ್ಯೂಸಿಕಲ್ ಪಡುಬಿದ್ರಿ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ತಿಳಿಸಿದ್ದಾರೆ. ಕಳೆದ 19 ವರ್ಷಗಳಿಂದ ಸಂಸ್ಥೆಯು ಸಾಮಾಜಿಕ ಹಾಗು ಕಲಾ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬಂದಿರುತ್ತದೆ. ಪಡುಬಿದ್ರಿಯಲ್ಲಿ ಪ್ರಥಮ ಬಾರಿಗೆ ಉಭಯ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆಯನ್ನು ಅಯೋಜಿಸಿರುತ್ತದೆ. ಗ್ರಾಮೀಣ ಮಟ್ಟದ ಕಲಾ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಂಡು ಬರುತ್ತಿದೆ.
19 Mar 2025, 04:47 PM
Category: Kaup
Tags: