ಶಿರ್ವ : ವಿಶ್ವಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ದ್ವಾದಶ ವರ್ಷದ ವಾರ್ಷಿಕೋತ್ಸವ ಸಂಪನ್ನ
Thumbnail
ಶಿರ್ವ : ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗದ ದ್ವಾದಶ ವರ್ಷದ ವಾರ್ಷಿಕೋತ್ಸವವು ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುಂಡ್ಕೂರು ಶ್ರೀ ವಿಶ್ವ ಬ್ರಾಹ್ಮಣ ಯುವ ಸೇವಾದಳದ ಗೌರವಾಧ್ಯಕ್ಷರಾದ ಪ್ರಸಾದ್ ತಂತ್ರಿಗಳು ವಿಶ್ವಕರ್ಮರು ಬ್ರಾಹ್ಮಣತ್ವವನ್ನು ಬೆಳೆಸಬೇಕು. ದೇವರನ್ನು ಸೃಷ್ಟಿಸುವ ನಾವು ದೇವರ ಪೂಜೆಯನ್ನು ಯಾಕೆ ಬಿಟ್ಟು ಕೊಟ್ಟಿದ್ದೇವೆ ಎಂದು ಚಿಂತನೆ ಮಾಡುವ ಕಾಲಘಟ್ಟದಲ್ಲಿ ಇದ್ದೇವೆ. ಮುಂದಿನ ಯುವ ಪೀಳಿ ಗೆಯತ್ತ ಮುಖ ಮಾಡಿದ ನಾವು ಜಾಗೃತರಾಗಬೇಕು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಿರಿಯ ವೈದಿಕರಾದ ಮೋಹನ್ ಪುರೋಹಿತ್ ದಂಪತಿಗಳನ್ನು ಸನ್ಮಾನಿಸಲಾಯಿತು. ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಉಮೇಶ ಆಚಾರ್ಯ ಮತ್ತು ವೇದಾವತಿ ಆಚಾರ್ಯ ಇವರನ್ನು ಅಭಿನಂದಿಸಲಾಯಿತು. ಸುಮಾರು 27 ಜನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು. 5 ಜನರಿಗೆ ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಲಾಯಿತು. ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿದರು. ಮಂಜುಳಾ ಉಮೇಶ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಮಾಧವಾಚಾರ್ಯ ವರದಿ ವಾಚಿಸಿದರು. ಕೋಶಾಧಿಕಾರಿ ಪ್ರಶಾಂತ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಗೌರವಾಧ್ಯಕ್ಷ ಸುರೇಶ ಆಚಾರ್ಯ, ಬಂಟಕಲ್ಲು ಗಾಯತ್ರಿ ವೃಂದದ ಅಧ್ಯಕ್ಷೆ ವಿದ್ಯಾ ಹರೀಶ್ ಆಚಾರ್ಯ, ಕುತ್ತ್ಯಾರು ಶ್ರೀ ದುರ್ಗಾಪರಮೇಶ್ವರಿ ಯುವಕ ವೃಂದದ ಅಧ್ಯಕ್ಷ ಶ್ರೇಯಸ್ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸಹನಾ ಗಣೇಶ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಉಮೇಶ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಂಜೀವ ಆಚಾರ್ಯ ವಂದಿಸಿದರು. ಪ್ರೀತಮ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಹಿಳಾ ಬಳಗದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
20 Mar 2025, 09:53 AM
Category: Kaup
Tags: