ಪಡುಬಿದ್ರಿ : ಅರಣ್ಯ ಇಲಾಖೆ ನೆಟ್ಟ ಗಿಡಗಳನ್ನು ಜೆಸಿಬಿಯಿಂದ ಕಿತ್ತೆಸೆದ ವ್ಯಕ್ತಿ ; ದೂರು ದಾಖಲು
Thumbnail
ಪಡುಬಿದ್ರಿ : ಪಡುಬಿದ್ರಿಯ ಅಲಂಗಾರು ಎಂಬಲ್ಲಿ ರಾ. ಹೆ. 66ರ ಬದಿಯಲ್ಲಿ ಬೆಳೆದ ಗಿಡಗಳು ಜಾಹೀರಾತು ಫಲಕಗಳಿಗೆ ಅಡ್ಡವಾಗುತ್ತದೆ ಎಂದು ಅರಣ್ಯ ಇಲಾಖೆ ನೆಟ್ಟ 42 ಗಿಡಗಳು ಹಾಗೂ ಅರಣ್ಯ ಇಲಾಖೆಯ ಬೋರ್ಡನ್ನು ಜಾಹೀರಾತು ಫಲಕ ಹಾಕುವ ವ್ಯಕ್ತಿ ಜೆಸಿಬಿಯಿಂದ ಕಿತ್ತೆಸೆದ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. 2023 ನೇ ವರ್ಷದ ಜೂನ್‌ ತಿಂಗಳಲ್ಲಿ ಹೊಳೆ ದಾಸವಾಳ, ಮೇ ಪ್ಲವರ್‌, ನೇರಳೆ, ಕಕ್ಕೆ ಮುಂತಾದ ಗಿಡಗಳನ್ನು ಅರಣ್ಯ ಇಲಾಖಾ ವತಿಯಿಂದ ನೆಟ್ಟಿದ್ದು ಅದರ ಪೋಷಣೆ ಕರ್ತವ್ಯವನ್ನು ಅರಣ್ಯ ಪಾಲಕ ಅಖಿಲೇಶ್ ನಿರ್ವಹಿಸಿಕೊಂಡು ಬರುತ್ತಿದ್ದು, ಎಂದಿನಂತೆ ಗಸ್ತಿನಲ್ಲಿರುವಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಜಾಹಿರಾತು ಫಲಕಗಳನ್ನು ಹಾಕುವ ರೋಶನ್‌ ಎಂಬಾತನ ವಿರುದ್ಧ ಅರಣ್ಯ ಪಾಲಕ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
21 Mar 2025, 01:49 PM
Category: Kaup
Tags: