ಎರ್ಮಾಳಿನಲ್ಲಿ ಯುವಕನಿಗೆ ಕಾರು ಡಿಕ್ಕಿ ; ಗಂಭೀರ
ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಎರ್ಮಾಳು ಶ್ರೀ ಜನಾರ್ಧನ ದೇವಸ್ಥಾನದ ಎದುರು ರಾ.ಹೆ. 66ರಲ್ಲಿ ಕೊರಿಯರ್ ಸರ್ವೀಸ್ ಯುವಕನಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭಿರವಾಗಿ ಗಾಯಗೊಂಡ ಘಟನೆ ಮಂಗಳವಾರ ಘಟಿಸಿದೆ.
ಗಾಯಗೊಂಡ ಯುವಕನನ್ನು ಅದಮಾರು ಕೆಮುಂಡೇಲು ಗಣೇಶ್ ಆಚಾರ್ಯರವರ ಮಗ ಶರಣ್ ಆಚಾರ್ಯ ಎಂದು ಗುರುತಿಸಲಾಗಿದೆ.
ತೀವ್ರ ಗಾಯಗೊಂಡ ಯುವಕನನ್ನು ಉಚ್ಚಿಲದ ಎಸ್‌ಡಿಪಿಐ ಅಂಬುಲೆನ್ಸ್‌ನಲ್ಲಿ ಸಾರ್ವಜನಿಕರ ಸಹಕಾರದಲ್ಲಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
