ಪಡುಬಿದ್ರಿ : ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ - ಸ್ಟಾರ್ ನೃೆಟ್ ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನ
Thumbnail
ಪಡುಬಿದ್ರಿ : ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ (ರಿ.) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ "ಸ್ಟಾರ್ ನೃೆಟ್" ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಯಮಿ ಬೋಳ ಪ್ರಶಾಂತ್ ಕಾಮತ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಸಾಂಸ್ಕೃತಿಕ ನಾಡು ನಮ್ಮ ತುಳುನಾಡಿನ ಊರ ಜಾತ್ರೆಯಲ್ಲಿ ವಿಭಿನ್ನವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಭಗವಂತನಿಗೆ ಸಮರ್ಪಿಸುವ ಒಳ್ಳೆಯ ಕಾರ್ಯವನ್ನು ಸಂಸ್ಥೆ ನಡೆಸುತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು. ಮಾಜಿ ತಾ.ಪಂ.ಸದಸ್ಯ ನವೀನಚಂದ್ರ ಜೆ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಂಸ್ಕೃತಿಕ ಚಟುವಟಿಕೆ ಜೀವನದ ಅವಿಭಾಜ್ಯ ಅಂಗ. ದೇಶ ವಿದೇಶದ ಸಾಂಸ್ಕೃತಿಕ ವೃೆವಿಧ್ಯತೆಗಳು ಒಂದು ಸಾಂಸ್ಕೃತಿಕ ಬೆಳವಣಿಗೆಗೆ ದಾರಿಯಾಗಿದೆ. ನಿರಂತರವಾಗಿ 20 ವರ್ಷಗಳಿಂದ ವಿಭಿನ್ನ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಹೆಮ್ಮೆಯ ವಿಷಯ. ಯುವ ಜನತೆ ನಮ್ಮ ದೇಶದ ಸಂಸ್ಕೃತಿ ಮತ್ತು ಸಾಂಸ್ಕೃತಿಕ ವೃೆವಿಧ್ಯತೆಯನ್ನು ಬೆಳೆಸುವಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಸನ್ಮಾನ : ಈ ಸಂದರ್ಭದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಾಜಿ ತಾ.ಪಂ. ಸದಸ್ಯರಾದ ನವೀನಚಂದ್ರ ಜೆ ಶೆಟ್ಟಿ ಹಾಗು ಉದ್ಯಮಿ ಬೋಳ ಪ್ರಶಾಂತ್ ಕಾಮತ್ ರವನ್ನು ಸನ್ಮಾನಿಸಲಾಯಿತು. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಂದ್ರ ಶೆಟ್ಟಿ, ಕಾಂಚನ್ ಹುಂಡೈ ಆಡಳಿತ ನಿರ್ದೇಶಕ ಪ್ರಸಾದ್ ರಾಜ್ ಕಾಂಚನ್, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೃೆ, ಅದಾನಿ ಫೌಂಡೇಶನ್ ಅಧ್ಯಕ್ಷ ಕಿಶೋರ್ ಆಳ್ವ, ಸಂತೋಷ್ ಕುಮಾರ್ ಶೆಟ್ಟಿ ಪಲ್ಲವಿ, ಮಿಥುನ್ ಆರ್. ಹೆಗ್ಡೆ, ದಮಯಂತಿ ಅಮೀನ್, ಶಿವಕುಮಾರ್ ಕರ್ಜೆ, ಸುಕುಮಾರ್ ಶೆಟ್ಟಿ, ನಟರಾಜ್ ಪಿ.ಎಸ್, ದೀಪಕ್ ಎರ್ಮಾಳ್, ರೂಪೇಶ್ ಕಲ್ಮಾಡಿ, ಗಣೇಶ್ ಆಚಾರ್ಯ ಉಚ್ಚಿಲ, ರಮೇಶ್ ಯು.‌, ನವೀನ್ ಎನ್.ಶೆಟ್ಟಿ, ಅಶೋಕ್ ಸಾಲ್ಯಾನ್, ರಚನ್ ಸಾಲ್ಯಾನ್, ಸಂತೋಷ್ ಪಡುಬಿದ್ರಿ, ಚಲನಚಿತ್ರ ನಟರಾದ ಪ್ರಥ್ವಿ ಅಂಬರ್, ರಮೇಶ್ ರೃೆ ಕುಕ್ಕೆಹಳ್ಳಿ, ಬಹುಭಾಷಾ ನಟಿ ಚಿರಶ್ರಿ ಅಂಚನ್, ವನ್ಸಿಟಾ ಡಯಾಸ್, ಗಿಚ್ಚಿ ಗಿಲಿ ಗಿಲಿ ರಿಯಾಲಿಟಿ ಖ್ಯಾತಿಯ ದೀಕ್ಷಾ ಬ್ರಹ್ಮಾವರ, ರೂಪದರ್ಶಿ ಸಿಂಚನಾ ಪ್ರಕಾಶ್ ಉಪಸ್ಥಿತರಿದ್ದರು. ಡ್ರೀಮ್ಸ್ ಗರ್ಲ್ಸ್ ನೃತ್ಯ ತಂಡದವರಿಂದ "ನೃತ್ಯ ವೃೆಭವ" ಹಾಗು ಶಶಿ ಮ್ಯೂಸಿಕಲ್ ಪಡುಬಿದ್ರಿ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಿತು. ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ಅಮೀನ್ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿ, ವಂದಿಸಿದರು.
Additional image Additional image
25 Mar 2025, 02:47 PM
Category: Kaup
Tags: