ಇನ್ನಂಜೆ ಮಹಿಳಾ ಮಂಡಳಿ ವತಿಯಿಂದ ಮಹಿಳಾ ದಿನಾಚರಣೆ
ಕಾಪು : ಇನ್ನಂಜೆ ಮಹಿಳಾ ಮಂಡಳಿ ವತಿಯಿಂದ ಎಸ್ ವಿಎಚ್ ಶಾಲೆಯ ದಾಸ ಭವನದಲ್ಲಿ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಮಹಿಳಾ ಮಂಡಳಿಯ ಗೌರವ ಅಧ್ಯಕ್ಷರಾದ ಪುಷ್ಪ ರವೀಂದ್ರ ಶೆಟ್ಟಿಯವರು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಾಜಶ್ರೀಯವರು ಮಾತನಾಡಿ, ಹೆಣ್ಣು ಮಕ್ಕಳಲ್ಲಿ ಕಂಡು ಬರುವ ಆರೋಗ್ಯ ಸಮಸ್ಯೆ, ಅದಕ್ಕೆ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಮಹಿಳಾ ಮಂಡಳಿಗಳ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಗೀತಾ ವಾಗ್ಳೆ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಸಾಂದರ್ಭಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷರಾಗಿದ್ದು, ಗ್ರಾಮ ಪಂಚಾಯತಿಯನ್ನು ಮುನ್ನಡೆಸಿದ ಐದು ಮಂದಿ ಗ್ರಾಮದ ಮಹಿಳಾ ಸಾಧಕರಾದ ಶಶಿಕಲಾ ಎನ್ ಶೆಟ್ಟಿ, ವಸಂತಿ ಆಚಾರ್ಯ, ರೇಖಾ ಅನಿಲ್ ಕುಮಾರ್,
ಮಲ್ಲಿಕಾ ಆಚಾರ್ಯ, ಮಾಲಿನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಮಹಿಳಾ ಮಂಡಳಿಯ ಸದಸ್ಯರಿಗೆ ಆರೋಗ್ಯ ತಪಾಸಣೆ, ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಸಿ ಬಹುಮಾನ ವಿತರಿಸಲಾಯಿತು.
ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ವೇತ ಎಲ್. ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.
ಕೋಶಾಧಿಕಾರಿ ಪೂರ್ಣಿಮಾ ಸುರೇಶ್, ಜತೆ ಕಾರ್ಯದರ್ಶಿ ಅನಿತಾ ಮಥಾಯಸ್, ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಮಹಿಳಾ ಮಂಡಳಿಯ ಗೌರವ ಸಲಹೆಗಾರರಾದ ಸಬು ನಂದನ್ ಕುಮಾರ್ ಸ್ವಾಗತಿಸಿದರು.
ಕಾರ್ಯದರ್ಶಿ ಸಿಲ್ವಿಯಾ ಕ್ಯಾಸ್ತಲಿನೋ ವಂದಿಸಿದರು.
