ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕಾಪು ತಾಲೂಕು : ಕಾಪುವಿನಲ್ಲಿ ಸಿಹಿತಿಂಡಿ ವಿತರಣೆ
ಕಾಪು : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕಾಪು ತಾಲೂಕು ವತಿಯಿಂದ ಸೋಮವಾರ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಕಾಪುವಿನಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.
ಈ ಸಂದರ್ಭ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾ ಸಮಿತಿ ಸದಸ್ಯ ಅನ್ವರ್ ಆಲಿ ಮಾತನಾಡಿ,
ಸಮಾಜದಲ್ಲಿ ಶಾಂತಿ, ಸ್ನೇಹ, ಪ್ರೀತಿ ಮೂಡಿಬರಲಿ. ಸಮಾಜದ ಎಲ್ಲರೂ ಸುಖ, ಶಾಂತಿ, ನೆಮ್ಮದಿಯಿಂದ ಬಾಳಬೇಕು. ಈ ನಿಟ್ಟಿನಲ್ಲಿ ಕಾಪು ವೃತ್ತನಿರೀಕ್ಷಕರ ಕಚೇರಿಯಿಂದ ಕಾಪು ಠಾಣೆಯವರೆಗಿನ ಸುಮಾರು 300 ಅಂಗಡಿಗಳಿಗೆ ಸಿಹಿತಿಂಡಿಯ ಪೊಟ್ಟಣವನ್ನು ವಿತರಿಸಲಾಗಿದೆ. ಹಬ್ಬಗಳು ಎಲ್ಲಾ ಧರ್ಮ, ಜಾತಿ, ವರ್ಗಗಳ ನಡುವಿನ ಭಾಂದವ್ಯವನ್ನು ಗಟ್ಟಿಯಾಗಿಸಿ ಸ್ನೇಹ ಮತ್ತು ಒಗ್ಗಟ್ಟನ್ನು ಮೂಡಿಸಬೇಕು ಎಂದರು.
ಕಾಪು ವೃತ್ತನಿರೀಕ್ಷಕರ ಕಚೇರಿಯ ಸಿಬ್ಬಂದಿಯವರಿಗೆ, ಕಾಪು ಪೇಟೆಯ ಅಂಗಡಿಗಳಿಗೆ, ಪೌರ ಕಾರ್ಮಿಕರಿಗೆ ಮತ್ತು ಕಾಪು ಠಾಣೆಯ ಸಿಬ್ಬಂದಿಯವರಿಗೆ ಸಿಹಿತಿಂಡಿ ವಿತರಿಸಲಾಯಿತು.
ಈ ಸಂದರ್ಭ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕಾಪು ತಾಲೂಕು ಅಧ್ಯಕ್ಷರಾದ ನಸೀರ್ ಅಹಮದ್, ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಶಬೀಹ್ ಅಹಮದ್ ಕಾಝೀ, ಕಾಪು ತಾಲೂಕು ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್, ಕೋಶಾಧಿಕಾರಿ ಬಿ.ಎಮ್.ಮೊಯ್ದಿನ್, ಜೊತೆ ಕಾರ್ಯದರ್ಶಿ ಮೊಹಮ್ಮದ್ ಆಝಮ್ ಶೇಕ್, ಕಾಪು ಸಮಿತಿ ಸದಸ್ಯರಾದ ಮುಸ್ತಾಕ್ ಸಾಹೇಬ್, ಮೊಹಮ್ಮದ್, ಮಹಮ್ಮದ್ ಆಲಿ, ಸನಾವರ್ ಶೇಕ್, ಷಹದತ್ ಆಲಿ, ಆಸಿಫ್ ಕಟಪಾಡಿ, ಬುಡಾನ್ ಸಾಹೇಬ್, ಸುಲೇಮಾನ್ ಮತ್ತಿತರರು ಉಪಸ್ಥಿತರಿದ್ದರು.
