ಕಾಪು ದಂಡತೀರ್ಥ ವಿದ್ಯಾಸಂಸ್ಥೆ : ಬೇಸಿಗೆ ಶಿಬಿರ ಉದ್ಘಾಟನೆ
Thumbnail
ಕಾಪು : ಪ್ರಕೃತಿ ಸಮತೋಲನವನ್ನು ಕಾಪಾಡುವಲ್ಲಿ ವನ್ಯಜೀವಿಗಳು ಹಾಗೂ ಹಾವುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಪರಿಸರ ವ್ಯವಸ್ಥೆಯಲ್ಲಿ ಅವು ಎಷ್ಟು ಮುಖ್ಯ ಎಂಬುದನ್ನು ಅರಿತುಕೊಂಡು ಅವುಗಳನ್ನು ಸಂರಕ್ಷಿಸಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ವನ್ಯಜೀವಿ ಹಾಗೂ ಉರಗ ರಕ್ಷಕ ಅಕ್ಷಯ್ ಎನ್. ಶೇಟ್ ಹೇಳಿದರು. ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಜರಗಿದ ಸ್ಕೌಟ್ಸ್, ಗೈಡ್ಸ್ ,ಕಬ್, ಬುಲ್-ಬುಲ್ ಮತ್ತು ಸೇವಾದಳಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೀಲಾನಂದ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಕುಮಾರಿ ಅನುಷ್ಕಾ ಸ್ವಾಗತಿಸಿದರು. ವಿದ್ಯಾರ್ಥಿ ಮಾಸ್ಟರ್ ರಚಿತ್ ಕೆ. ದೇವಾಡಿಗ ವಂದಿಸಿದರು. ಕುಮಾರಿ ಕ್ಷಮ್ಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
Additional image
02 Apr 2025, 10:43 PM
Category: Kaup
Tags: