ಎ. 8, 9 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹರಕೆ ಮಾರಿಪೂಜೆ
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ವಿವಿಧ ಉಪಸಮಿತಿ, ಸಿಬ್ಬಂದಿಗಳು ಮತ್ತು ನೌಕರವೃಂದ ಹಾಗೂ ಭಕ್ತವೃಂದದ ಸಹಕಾರದೊಂದಿಗೆ ಎ. 8 ಮತ್ತು 9 ರಂದು ಮಹಾಸೇವೆ ರೂಪದಲ್ಲಿ ಪ್ರಥಮ ಹರಕೆ ಮಾರಿಪೂಜೆ ನಡೆಯಲಿದ್ದು ಸಮಾಲೋಚನಾ ಸಭೆ ನಡೆಯಿತು.
ಎಪ್ರಿಲ್ 8ರ ಸಂಜೆ 5ಕ್ಕೆ ಹೂ-ಹಿಂಗಾರ ಮೆರವಣಿಗೆ, ರಾತ್ರಿ 8:30ಕ್ಕೆ ಒಡೆಯನ ಸನ್ನಿದಾನದಿಂದ ರಜತ ರಥದಲ್ಲಿ ಅಲಂಕೃತಳಾಗಿ ಮಾರಿಯಮ್ಮನ ಆಗಮನ.
ರಾತ್ರಿ 10:30ಕ್ಕೆ ದರ್ಶನ ಸೇವೆ.
ಎಪ್ರಿಲ್ 9ರ ಬುಧವಾರ ಮದ್ಯಾಹ್ನ 3ಕ್ಕೆ ದರ್ಶನ ಸೇವೆ. ಸಂಜೆ 7ರಿಂದ 10ಗಂಟೆಯವರೆಗೆ ಮಾರಿಪೂಜೆಯ ಅನ್ನಪ್ರಸಾದ ವಿತರಣೆಯಾಗಲಿದೆ.
ಭಕ್ತರು, ಹೂ ಹಿಂಗಾರ ಸಹಿತ ವಿವಿಧ ಸೇವೆಗಳನ್ನು ಹರಕೆ ರೂಪದಲ್ಲಿ ನೀಡಲು ಅವಕಾಶವಿದೆ, ಹೆಚ್ಚಿನ ಮಾಹಿತಿಯನ್ನು ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು.
ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕಾಪು ಕ್ಷೇತ್ರದ ಶಾಸಕರು ಮತ್ತು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಗಂಗಾಧರ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಬೀನಾ ವಿ. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ಸಾಲ್ಯಾನ್, ರವೀಂದ್ರ ಮಲ್ಲಾರು, ಮನೋಹರ ರಾವ್ ಕಲ್ಯ, ಚರಿತಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
