ಏ.17, 18 : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ದೃಢ ಸಂಪ್ರೋಕ್ಷಣೆ
ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿದ್ವಾನ್ ಕೆ. ಜಿ ರಾಘವೇಂದ್ರ ತಂತ್ರಿಯವರ ಮಾರ್ಗದರ್ಶನದಲ್ಲಿ, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ಕಲ್ಯಾ ವೇದಮೂರ್ತಿ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ಏ.17, ಗುರುವಾರ ಮತ್ತು ಏ.18, ಶುಕ್ರವಾರ ಕಾಪು ಮಾರಿಯಮ್ಮನ ದೃಢ ಸಂಪ್ರೋಕ್ಷಣೆ ನಡೆಯಲಿದೆ.
ಏ.17, ಗುರುವಾರ ಬೆಳಿಗ್ಗೆ ಗಂಟೆ 9 ಕ್ಕೆ ಪ್ರಾರ್ಥನೆ, ಪುಣ್ಯಾಹ, ನಾಂದಿ ಸಮಾರಾಧನೆ, ಮಾತೃಕಾ ಪೂಜೆ, ಗಣಯಾಗ, ನವಗ್ರಹ ಯಾಗ.
ಸಂಜೆ ಗಂಟೆ 5 ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಯಂಕಾಲ 6.00ರಿಂದ ಸಪ್ತಶತಿ ಪಾರಾಯಣ, ದುರ್ಗಾ ನಮಸ್ಕಾರ ಪೂಜೆ, ಅಷ್ಟಾವಧಾನ
ರಾತ್ರಿ 6.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ
ರಾತ್ರಿ 7.30 ಹಾಸ್ಯಮಯ ತುಳು ನಾಟಕ 'ಅಮ್ಮು.. ಅಮುಂಡರಾ...?' ಪ್ರದರ್ಶನಗೊಳ್ಳಲಿದೆ.
ಏ.18, ಶುಕ್ರವಾರ
ಬೆಳಿಗ್ಗೆ ಗಂಟೆ 7.30ರಿಂದ ಚತುಃಷಷ್ಠಿ, ಯೋಗಿನೀ ಮಂಡಲ ಪೂಜಾ, ಚತು:ಷಷ್ಠಿ ಯೋಗಿನೀ ಬಲಿ,
ಚತುಃಷಷ್ಠಿ ಯೋಗಿನಿ ದೇವತಾ ಪಾಯಸಯಾಗ. ಪೂರ್ವಾಹ್ನ ಗಂಟೆ 11 ಕ್ಕೆ ಪೂರ್ಣಾಹುತಿ, ಪಂಚವಿಂಶತಿ ಕಲಶ ಆರಾಧನೆ, ಕಲಶಾಭಿಷೇಕ, ಪ್ರಸನ್ನ ಪೂಜಾ ಪೂರ್ವಾಹ್ನ ಗಂಟೆ 11.30 ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ಇರಲಿದೆ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಉಚ್ಚಂಗಿ ಸಹಿತ ಕಾಪು ಶ್ರೀ ಮಾರಿಯಮ್ಮ ದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ದೇವಳದ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಕೆ ಪ್ರಕಾಶ್ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
