ಮೇ 5 : ಬಂಟಕಲ್ಲಿನಲ್ಲಿ ಕ.ಸಾ.ಪ. 111ನೇ ಸಂಸ್ಥಾಪನಾ ದಿನಾಚರಣೆ
ಶಿರ್ವ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಕ.ಸಾ.ಪ. ಘಟಕ ಮತ್ತು ನಾಗರಿಕ ಸೇವಾ ಸಮಿತಿ ಬಂಟಕಲ್ಲು ಇದರ ಸಹಭಾಗಿತ್ವದಲ್ಲಿ "ಕನ್ನಡ ಸಾಹಿತ್ಯ ಪರಿಷತ್ತು ಇದರ 111ನೇ ಸಂಸ್ಥಾಪನಾ ದಿನಾಚರಣೆ" ಹಾಗೂ ಕುರಾಡಿ ಸೀತಾರಾಮ ಅಡಿಗ ಮತ್ತು ಡಿ.ಎಸ್.ಕಮಲಾಕ್ಷಿ ಅಡಿಗ ಸ್ಮಾರಕ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಮೇ 5, ಸೋಮವಾರ ಸಂಜೆ ಘಂಟೆ 4 ಕ್ಕೆ ಬಂಟಕಲ್ಲು ಬಸ್ಸು ನಿಲ್ದಾಣದ ಸಾರ್ವಜನಿಕ ತೆರೆದ ವಾಚನಾಲಯದಲ್ಲಿ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿ ಹಾಗೂ ಕವಯತ್ರಿ ಪ್ರೊ.ಡಾ. ಫ್ಲಾವಿಯಾ ಕಸ್ತಲಿನೊ ಮಣಿಪಾಲ ಇವರು ನೆರವೇರಿಸಲಿದ್ದು, ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡುವರು. ಸಮಾರಂಭದ ಅಧ್ಯಕ್ಷತೆಯನ್ನು ಕ.ಸಾ.ಪ. ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ.ರಾಮರಾಯ ಪಾಟ್ಕರ್, ಕ.ಸಾ.ಪ. ಜಿಲ್ಲಾ ಗೌ. ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕ.ಸಾ.ಪ. ಸಭಾಭವನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಕಟ್ಟಿಂಗೇರಿ ದೇವದಾಸ ಹೆಬ್ಬಾರ್ ಉಪಸ್ಥಿತರಿರುವರು.
ಈ ಸಂದರ್ಭದಲ್ಲಿ ಹಿರಿಯ ನಿವೃತ್ತ ಶಿಕ್ಷಕ ದಂಪತಿಗಳಾದ ದೇವೇಂದ್ರ ನಾಯಕ್ ಶಿರ್ವ ಮತ್ತು ವನಿತಾ ಡಿ ನಾಯಕ್‌ರವರನ್ನು ಬೆನಗಲ್ ವಿಶ್ವಭಾರತ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಸೂರಾಲು ನಾರಾಯಣ ಮಡಿ ಸನ್ಮಾನಿಸುವರು ಎಂದು ಕಾಪು ತಾಲೂಕು ಕ.ಸಾ.ಪ. ಘಟಕದ ಪ್ರಕಟನೆ ತಿಳಿಸಿದೆ.
