ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ
ಕಾಪು: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾರವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ ನೀಡಿದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಅವರನ್ನು ಗೌರವಿಸಲಾಯಿತು.
ದೇವಳದ ಶಿಲಾ ಕೆತ್ತನೆಗಳನ್ನು ಗಮನಿಸಿದರು. ಹೊಸ ಮಾರಿಗುಡಿ ಅಭಿವೃದ್ಧಿ ಹೊಂದಿದ ಬಗ್ಗೆ ವಿವರಿಸಲಾಯಿತು. ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಮತ್ತು ಕಾಪು ಶಾಸಕ, ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಪ್ರವಾಸೋದ್ಯಮದ ನಿಟ್ಟಿನಲ್ಲಿ ಅನುದಾನ ಒದಗಿಸುವ ಕುರಿತು ಮನವಿ ನೀಡಿದರು.
ಗಜೇಂದ್ರ ಸಿಂಗ್ ಶೇಖಾವತ್ ಮನವಿಯನ್ನು ಸ್ವೀಕರಿಸಿ ಅನುದಾನ ಒದಗಿಸುವುದಾಗಿ ಅಮ್ಮನ ಸನ್ನಿದಾನದಲ್ಲಿ ಭರವಸೆ ನೀಡಿದರು.
ಈ ಸಂದರ್ಭ ಕಾಪು ಬಿಜೆಪಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಪೊಲೀಸ್ ಅಧಿಕಾರಿಗಳು, ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
