ಪಡುಬಿದ್ರಿ : ಗ್ರಾ.ಪಂ. ಉಪಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
Thumbnail
ಪಡುಬಿದ್ರಿ : ಪಾದೆಬೆಟ್ಟು-2 ಅನುಸೂಚಿತ ಜಾತಿ ಮಹಿಳೆಗೆ ಮೀಸಲಿರಿಸಿದ ಉಪಚುನಾವಣಾ ಕ್ಷೇತ್ರಕ್ಕೆ ಮೇ.25ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಪಿ.ಉಷಾರವರು ಪಕ್ಷದ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕರುಣಾಕರ್ ಎಮ್ ಪೂಜಾರಿ, ಕೆ.ಪಿ.ಸಿ‌.ಸಿ ಕೋ-ಆರ್ಡೀಟರ್ ನವೀನಚಂದ್ರ ಜೆ ಶೆಟ್ಟಿ, ದಲಿತ ಮುಖಂಡರಾದ ಶೇಖರ್ ಹೆಜ್ಮಾಡಿ, ಗ್ರಾ.ಪಂ.ಸದಸ್ಯರಾದ ನವೀನ್ ಎನ್ ಶೆಟ್ಟಿ, ಗಣೇಶ್ ಕೋಟ್ಯಾನ್, ಜ್ಯೋತಿ ಮೆನನ್, ಮಾಜಿ ಸದಸ್ಯರಾದ ಅಶೋಕ್ ಸಾಲ್ಯಾನ್, ದಿನೇಶ್ ಕಂಚಿನಡ್ಕ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಹಸನ್ ಬಾವ, ಕೀರ್ತಿ ಕುಮಾರ್, ಕಾಪು ಬ್ಲಾಕ್ ಕಾಂಗ್ರೆಸ್ ಎಸ್.ಸಿ /ಎಸ್.ಟಿ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ್ ಕೆ., ವಿಠಲ್ ಮಾಸ್ಟರ್, ಸಂತೋಷ್ ಪಡುಬಿದ್ರಿ ಉಪಸ್ಥಿತರಿದ್ದರು.
12 May 2025, 05:28 PM
Category: Kaup
Tags: