ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ ಪಡುಬಿದ್ರಿ ಸಂಸ್ಥೆಯ 15ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಸಾಗರ್ ವಿದ್ಯಾ ಮಂದಿರ ಶಾಲೆಯ ಸಾಗರ ದರ್ಶಿನಿ ವೇದಿಕೆಯಲ್ಲಿ ನೆರವೇರಿತು.
ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಲೀಲಾಧರ್ ಸಾಲಿಯಾನ್, ವಿದ್ಯಾಶ್ರೀ, ನೀತಾಗುರುರಾಜ್, ಚಂದ್ರಶೇಖರ್, ಅಶೋಕ್ ಸಾಲಿಯಾನ್, ಗಂಗಾಧರ ಕರ್ಕೇರ, ಅಜಿತ್ ಶೆಟ್ಟಿ, ಮಿಥುನ್ ಆರ್ ಹೆಗ್ಡೆ, ವಿಶ್ವಾಸ್ ಅಮೀನ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.
ವರ್ಷಿಣಿ ಎಲ್ ಕರ್ಕೇರ ಪ್ರಾರ್ಥಿಸಿದರು. ಕಿರಣ್ ರಾಜ್ ಕರ್ಕೇರ ಸ್ವಾಗತಿಸಿದರು. ಸಂತೋಷ್ ಎಚ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು. ದಿಶನ್ ಪುತ್ರನ್ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.