ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವಲ್ಲಿ ಅಯ್ಯಪ್ಪ ವೃತವು ಕಾರಣ : ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು
Posted On:
18-05-2025 04:15PM
ಕಟಪಾಡಿ : ಅನೇಕ ದೇವಸ್ಥಾನಗಳಿರುವ ಉಡುಪಿ, ದ.ಕ ಜಿಲ್ಲೆಯನ್ನು ದೇವರನಾಡೆಂದು ಹೇಳಬಹುದು. ಪಾಜಕ ಕ್ಷೇತ್ರ, ದುರ್ಗಾದೇವಿ ಸನ್ನಿಧಾನ, ಪರಶುರಾಮ ಸನ್ನಿಧಾನವನ್ನು ಸುತ್ತುವರಿಯುವ ಮೂಲಕ ಕಟಪಾಡಿ ಏಣಗುಡ್ಡೆಯ ಪಂಪಾ ಕ್ಷೇತ್ರದ ಅಯ್ಯಪ್ಪ ಸನ್ನಿಧಾನವು ಪಾವಿತ್ರ್ಯ ತರುವ ಕಾರ್ಯವಾಗಿದೆ. ಹಿಂದು ಧರ್ಮದ ಉಳಿವಿನೊಂದಿಗೆ ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವಲ್ಲಿ ಅಯ್ಯಪ್ಪ ವೃತವು ಕಾರಣವಾಗಿದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು ಹೇಳಿದರು.
ಅವರು ಕಟಪಾಡಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ವತಿಯಿಂದ ಏಣಗುಡ್ಡೆ ಕುರ್ಕಾಲು ರಸ್ತೆಯ ರಿಶಾಲ್ ನಗರದ ಪಂಪಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಕರ್ನಾಟಕದಲ್ಲಿಯೇ ಪ್ರಪ್ರಥಮ ಸಂಪೂರ್ಣ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ, ನಿಧಿಕುಂಭ ಕಾರ್ಯಕ್ರಮ ನೆರವೇರಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಕಟಪಾಡಿಯ ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ 40 ವರ್ಷಗಳ ನಂತರ ಸುಮಾರು 5 ಕೋಟಿ ವೆಚ್ಚದ ದೇವಳ ನಿರ್ಮಾಣದ ಕನಸು ಕಂಡಿದ್ದಾರೆ. ನನಸಾಗಲಿ ಎಂದರು.
ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನ ನಿರ್ಮಿಸಲು 30 ಸೆಂಟ್ಸ್ ನಿವೇಶನವನ್ನು ದಾನವಾಗಿ ನೀಡಿರುವ ಯುವ ಉದ್ಯಮಿ ರಿಶಾನ್ ಟಿ ಮತ್ತು ಪ್ರಮೀಳಾ ದಂಪತಿಯನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಚಂದ್ರಹಾಸ ಗುರುಸ್ವಾಮಿ ಮುಂಬೈ, ರಾಘು ಪೂಜಾರಿ ಕಲ್ಮಂಜೆ, ದಯಾನಂದ ವಿ ಬಂಗೇರ, ಪಲ್ಲಿ ಲಕ್ಮೀನಾರಾಯಣ ಹೆಗ್ಡೆ, ಶಶಿಧರ ವಾಗ್ಳೆ, ಶಶಿಧರ ಶೆಟ್ಟಿ ಮುಂಬೈ, ಯೋಧ ಸಚಿನ್ ಕರ್ಕೇರ, ನವೀನ್ ಅಮೀನ್ ಶಂಕರಪುರ, ಶಿವಪ್ರಸಾದ್ ಕಟಪಾಡಿ, ಸಂತೋಷ್ ಸುವರ್ಣ ಬೊಳ್ಜೆ, ರಾಧಾಕೃಷ್ಣ ಮೆಂಡನ್, ರಾಜೇಶ್ ಮಸ್ಕತ್, ಭುವನ್, ಗುರುಸ್ವಾಮಿ ಸುರೇಶ್ ಜತ್ತನ್ ಕಟಪಾಡಿ, ಅಧ್ಯಕ್ಷ ರಿಯಾನ್ ಟಿ ಕಟಪಾಡಿ, ಕಾರ್ಯಾಧ್ಯಕ್ಷ ಕೇಶವ ಕುಂದರ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಜಿ.ಸನಿಲ್ ಅಚ್ಚಡ ಕಟಪಾಡಿ ಉಪಸ್ಥಿತರಿದ್ದರು.
ಕ್ಷೇತ್ರದ ತಂತ್ರಿಗಳಾದ ವೆ| ಬ್ರ| ಶ್ರೀ| ಪ್ರಕಾಶ ವಿ. ಹೊಳ್ಳ ಶಕ್ತಿನಗರ ಮಂಗಳೂರು ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.
ಸಚಿನ್ ಕರ್ಕೇರ ಪ್ರಾರ್ಥಿಸಿ, ಪತ್ರಕರ್ತ ಪ್ರಕಾಶ್ ಸುವರ್ಣ ಕಟಪಾಡಿ ಸ್ವಾಗತಿಸಿ, ನಿರೂಪಿಸಿದರು.