ಕಾಪು ಶ್ರೀ ಹೊಸ ಮಾರಿಗುಡಿಗೆ ವಿವಿಧ ಕ್ಷೇತ್ರಗಳ ಗಣ್ಯರ ಭೇಟಿ
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪ್ರತಿನಿತ್ಯ ಹಲವಾರು ಅಧಿಕಾರಿ ವರ್ಗದವರು, ನ್ಯಾಯಾದೀಶರು, ವಕೀಲರು, ಪೊಲೀಸ್ ಅಧಿಕಾರಿಗಳು, ಸಿನಿಮಾ ನಟರು, ನಟಿಯರು ಸೇರಿದಂತೆ ರಾಜಕೀಯ ಧುರಿಣರು ಆಗಮಿಸುತ್ತಿದ್ದಾರೆ.
ಇದೀಗ ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ರಾಜಕೀಯ ಧುರೀಣರ ದಂಡು ಕಾಪು ಮಾರಿಯಮ್ಮನೆಡೆಗೆ ಸಾಗಿ ಬಂದಿದೆ.
ಮಹಾರಾಷ್ಟ್ರ ದಿಂಡೋಷಿ ಕ್ಷೇತ್ರದ ಶಾಸಕ ಮತ್ತು ಮುಂಬೈನ ಮಾಜಿ ಮೇಯರ್ ಸುನಿಲ್ ಪ್ರಭು, ಮಾಹಿಮ್ ಕ್ಷೇತ್ರದ ಶಾಸಕ ಮಹೇಶ್ ಸಾವಂತ್ ಮತ್ತು ಉದ್ಯಮಿ ಮಯೂರೇಶ್ ಪಾಟೀಲ್ ಅವರು ದೇವಳಕ್ಕೆ ಭೇಟಿ ನೀಡಿ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಮತ್ತು ಕಾರ್ಯಾಧ್ಯಕ್ಷ ಹಾಗೂ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮಕ್ಷಮದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.
ಅದೇ ರೀತಿ ಮಹಾರಾಷ್ಟ್ರದ ಬಾಂದ್ರ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯ ಮತ್ತು ಮಾಜಿ ಸಾರಿಗೆ ಸಚಿವ ಅನಿಲ್ ಪರಬ್, ಬಿ.ಈ. ಎಸ್. ಟಿ ಮಾಜಿ ಅಧ್ಯಕ್ಷ ಮತ್ತು ವರ್ಲಿ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯ ಮತ್ತು ಶಾಸಕ ಸುನಿಲ್ ಶಿಂದೆ, ವಿಧಾನ ಪರಿಷತ್ತಿನ ಸದಸ್ಯ ರಾಜನ್ಸ್, ಅವೆನ್ಯೂ ಹೋಟೆಲ್ ಮಾಲಕ ಉದ್ಯಮಿ ರಘುರಾಮ್ ಶೆಟ್ಟಿ ಮತ್ತು ಸುನಿಲ್ ಶೆಟ್ಟಿ ಹಾಗೂ ಮತ್ತಿತರರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಜಯಲಕ್ಷ್ಮಿ ಎಸ್.ಶೆಟ್ಟಿ,ಉದ್ಯಮಿಗಳಾದ ಶರತ್ ಹೆಗ್ಡೆ, ಪರ್ವತ್ ಶೆಟ್ಟಿ, ಅಂಕಿತ್ ಶೆಟ್ಟಿ, ಉತ್ತಮ್ ಶೆಟ್ಟಿ ಮತ್ತು ದೇವಳದ ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
