ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ವರ್ಷಂಪ್ರತಿಯಂತೆ ಕಾಪು ಕಂದಾಯ ತಾಲೂಕು ವ್ಯಾಪ್ತಿಯಲ್ಲಿ ಬರುವ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ/ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ಪಾಠದಲ್ಲಿ ಪೂರ್ಣ ಅಂಕ(125/125)ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರದೊಂದಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಅರ್ಹ ವಿದ್ಯಾರ್ಥಿಗಳು ಆಯಾ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ದೃಢೀಕರಣ ಪತ್ರದೊಂದಿಗೆ ಅಂಕಪಟ್ಟಿಯ ನಕಲು ಪ್ರತಿಯನ್ನು (ಕೃಷ್ಣಕುಮಾರ್ ರಾವ್ ಮಟ್ಟು, ಸಹಕಾರ್ಯದರ್ಶಿಗಳು, ಕಸಾಪ ಕಾಪು ತಾಲೂಕು ಘಟಕ, ಮಟ್ಟು ದೇವಸ್ಥಾನದ ಬಳಿ. ಅಂಚೆ ಕಟಪಾಡಿ -574105. ಮೊ. 94817 60611) ಜೂ.5ರೊಗೆ ಕಳುಹಿಸಬೇಕಾಗಿ ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.