ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ಎರ್ಮಾಳು ಬಡಾ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ New
Posted On:
25-05-2025 02:47PM
ಪಡುಬಿದ್ರಿ : ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರ ಸಂಘ (ನಿ.) ಎರ್ಮಾಳು ಬಡಾ, ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಕುಂಟಿಕಾನ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಜಂಟಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಹಿ.ಪ್ರಾ.ಶಾಲೆ ಎರ್ಮಾಳು ಬಡಾ ಇಲ್ಲಿ ಜರಗಿತು.
ಶಿಬಿರವನ್ನು ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರ ಸಂಘವು ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಜೊತೆಗೆ ಆರೋಗ್ಯದ ಬಗೆಯೂ ಕಾಳಜಿ ವಹಿಸಿ ಆರೋಗ್ಯ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ. ಜನರು ಆರೋಗ್ಯ ಶಿಬಿರಗಳ ಸದುಪಯೋಗಪಡಿಸಿಕೊಂಡು ಆರೋಗ್ಯದ ಬಗೆಗೆ ಜಾಗೃತರಾಗಬೇಕು ಎಂದು ಹೇಳಿದರು.
ಉದ್ಯಮಿ ಶೇಖರ ಆರ್ ಸಾಲ್ಯಾನ್, ಶಿಬಿರದ ಉಸ್ತವಾರಿ ಎ.ಜೆ. ಆಸ್ಪತ್ರೆ ವೈದ್ಯ ಡಾ. ಮಯೂರ್ ರೈ, ಡಾ.ಸಂಸ್ಕೃತಿ ಶೆಟ್ಟಿ, ಡಾ. ಆರತಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಎರ್ಮಾಳು ವಹಿಸಿದ್ದರು.
ಕಾರ್ಯಕ್ರಮವನ್ನು ಪ್ರಿಯಾಂಕ ಸಂತೋಷ್ ನಿರೂಪಿಸಿ, ವಂದಿಸಿದರು.