ಅಹಿಂಸಾ ಸಂದೇಶಕ್ಕಾಗಿ ಯುವಕರಿಬ್ಬರ 12 ದಿನ, ಮೂರು ರಾಜ್ಯಗಳು, ಮೂರು ಸಾವಿರ ಕಿ.ಮೀ. ಬೈಕ್ ರ್‍ಯಾಲಿಗೆ ಚಾಲನೆ New
Posted On:
25-05-2025 03:04PM
ಕಾಪು : ಕೌಟುಂಬಿಕ ಹಾಗೂ ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನರನ್ನು ಎಚ್ಚರಿಸುವುದಕ್ಕಾಗಿ ವನಸುಮ ಟ್ರಸ್ಟ್ ಕಟಪಾಡಿ ವತಿಯಿಂದ ಯುವಕರಾದ ದೃಶಾ ಕೊಡಗು ಮತ್ತು ಉಜ್ವಲ್ ಕಾಮತ್ ಇವರಿಂದ 12 ದಿನಗಳ, ಮೂರು ರಾಜ್ಯಗಳಲ್ಲಿ, ಮೂರು ಸಾವಿರ ಕಿಲೋಮೀಟರ್ ಬೈಕ್ ರ್‍ಯಾಲಿಗೆ ಭಾನುವಾರ ಬೆಳಿಗ್ಗೆ ಕಾಪು ಹೊಸ ಮಾರಿಗುಡಿ ಆವರಣದಲ್ಲಿ
ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು.
ಮೊದಲಿಗೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಕಲ್ಯ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಕಾಪು ಹೊಸ ಮಾರಿಗುಡಿಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಶುಭ ಹಾರೈಸಿದರು.
ವನಸುಮ ಟ್ರಸ್ಟ್ ಕಟಪಾಡಿ ಅಧ್ಯಕ್ಷ ಬಾಸುಮ ಕೊಡಗು ಮಾತನಾಡಿ, ದೃಶಾ ಕೊಡಗು ಮತ್ತು ಉಜ್ವಲ್ ಕಾಮತ್ ಇವರು 12 ದಿನಗಳ ಕಾಲ ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಲ್ಲಿ ಕೌಟುಂಬಿಕ ಮತ್ತು ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಕರಪತ್ರಗಳನ್ನು ವಿತರಿಸಲಿದ್ದಾರೆ. ತಜ್ಞರಿಂದ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡುವ ಮೂಲಕವೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಈ ಸಂದರ್ಭ ವನಸುಮ ಟ್ರಸ್ಟ್ ನ ಕಾವ್ಯವಾಣಿ ಕೊಡಗು, ಭಾಸ್ಕರ್ ಉದ್ಯಾವರ, ಜೇಸಿ ಸದಸ್ಯರು ಉಪಸ್ಥಿತರಿದ್ದರು.
ಜೇಸಿಐ ಉಡುಪಿ ಸಿಟಿ ಮತ್ತು ಜೇಸೀಐ ಕಟಪಾಡಿ ಈ ರ್‍ಯಾಲಿಯ ಸಂಘಟನೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಿದ್ದು, ಹಿರಿಯ ಜೇಸಿ ಬಾಸುಮ ಕೊಡಗು ಮಾರ್ಗದರ್ಶನದಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ 50 ಕ್ಕೂ ಹೆಚ್ಚು ಜೇಸೀ ಘಟಕಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ.