ಶಿರ್ವ : ಶಂಕರಪುರ ಸಮೀಪದ ಸಾಲ್ಮರ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರ, ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ಮತ್ತು ಇನ್ನಂಜೆ ಯುವಕ ಮಂಡಲ (ರಿ) ಇವರ ಸಹಯೋಗದಲ್ಲಿ ಜೂನ್.1, ರವಿವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30 ರ ಪರ್ಯಂತ ಆಸ್ಪತ್ರೆಯ ನುರಿತ ವೈದ್ಯರಿಂದ "ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ" ಸಾಲ್ಮರ ಆಯುರ್ವೇದ ಕೇಂದ್ರದಲ್ಲಿ ಜರುಗಲಿದೆ.
ಕಾರ್ಯಕ್ರಮವನ್ನು ಪಡುಬಿದ್ರಿ ಅಂಚನ್ ಆಯುರ್ವೇದ ಇಂಡಸ್ಟ್ರೀಸ್ ಇದರ ಆಡಳಿತ ನಿರ್ದೇಶಕರಾದ ಡಾ.ಟಿ.ನಾರಾಯಣ ಅಂಚನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮುನಿಯಾಲು ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಇಲ್ಲಿನ ಪ್ರಾಂಶುಪಾಲ ಡಾ.ಸತ್ಯನಾರಾಯಣ, ಇನ್ನಂಜೆ ಯುವಕ ಮಂಡಲದ ಅಧ್ಯಕ್ಷ ಮಧುಸೂದನ್ ಆಚಾರ್ಯ ಭಾಗವಹಿಸುವರು.
ಅಧ್ಯಕ್ಷತೆಯನ್ನು ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ಇದರ ಟ್ರಸ್ಟಿಗಳಾದ ಸಿಎ. ಹರಿದಾಸ್ ಭಟ್ ವಹಿಸುವರು.
ಶಿಬಿರದಲ್ಲಿ ಎಲ್ಲಾ ವಿಧಧ ಕಾಯಿಲೆಗಳಿಗೆ, ವಿಶೇಷವಾಗಿ ಸಂಧಿವಾತ, ಆಮವಾತ, ಬೆನ್ನು ನೋವು, ನರದೌರ್ಬಲ್ಯ, ತಲೆನೋವು, ಶೀತ,ಕೆಮ್ಮು,ಉಬ್ಬಸ, ತುರಿಕೆ, ಕಜ್ಜಿ, ಮುಂತಾದ ಚರ್ಮರೋಗಗಳು, ಗ್ಯಾಸ್ಟ್ರಿಕ್ ತೊಂದರೆ, ಮಲಬದ್ಧತೆ, ಮೂಲವ್ಯಾಧಿ, ಡಯಾಬಿಟಿಸ್, ಮಕ್ಕಳ ಬೆಳವಣಿಕೆ ಸಂಬಂಧಿ ಕಾಯಿಲೆಗಳು, ಹೆಂಗಸರ ಮುಟ್ಟು ಸಂಬಂಧಿ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಔಷಧಿಗಳನ್ನು ನೀಡಲಾಗುವುದು. ರಕ್ತಹೀನತೆ, ಮಧುಮೇಹ ರೋಗಕ್ಕೆ ಉಚಿತ ರಕ್ತ ತಪಾಸಣೆ ನಡೆಸಲಾಗುವುದು.
ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಿಬಿರ ಸಂಘಟಕರ ಪ್ರಕಟನೆ ತಿಳಿಸಿದೆ.