ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು : ರಜತ ಸಂಭ್ರಮ ; ಮಳೆ ನೀರು ಕೊಯ್ಲು ಉದ್ಘಾಟನೆ
ಉಡುಪಿ : ಯುವ ವಿಚಾರ ವೇದಿಕೆಯ ರಜತ ಸಂಭ್ರಮದ ಅಂಗವಾಗಿ ಭೂಮಿಯ ಅಂತರ್ಜಲ ಮರುಪೂರಣ, ಪರಿಸರ ಸ್ನೇಹಿ ಸರಳ ತಂತ್ರಜ್ಞಾನದ ವಿಶಿಷ್ಟ ಯೋಜನೆಯಾದ ಮಳೆ ನೀರು ಕೊಯ್ಲು ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ವೇದಿಕೆಯ ವಠಾರದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ್ಪೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಪೂಜಾರಿ, ಅರ್ಥಪೂರ್ಣ ಯೋಜನೆ ಯಶಸ್ಸಾಗಲಿ. ಗ್ರಾಮದ ಜನತೆಗೆ ಮಾದರಿಯಾಗಲಿ ಎಂದರು.
ಅತಿಥಿಗಳಾದ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನ್ ರೊಚ್, ಉಪ್ಪೂರು ವ್ಯ.ಸೇ.ಸ. ಸಂಘದ ನಿರ್ದೇಶಕರಾದ ರಮೇಶ್ ಕರ್ಕೇರ, ಉಪ್ಪೂರು ಸರಕಾರಿ ಪ್ರೌಢ ಶಾಲೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರತ್ನಾಕರ ಮೊಗವೀರ ಮಾತನಾಡಿದರು.
ವೇದಿಕೆ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು.
ವೇದಿಕೆಯ ಪ್ರಧಾನ ಕಾರ್ಯದರ್ಶಿ ಸದಾಶಿವ ಕುಮಾರ್ ಸ್ವಾಗತಿಸಿದರು. ಅಧ್ಯಕ್ಷರಾದ ಸಂದೀಪ್ ಶೆಟ್ಟಿ ವಂದಿಸಿದರು. ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
