ಕಾಪು : ಇನ್ನಂಜೆ ಗ್ರಾಮದ ಯುವಕ ಆತ್ಮಹತ್ಯೆ
Thumbnail
ಕಾಪು : ಕ್ಯಾಟರಿಂಗ್ ವೃತ್ತಿ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇನ್ನಂಜೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ರಾಕೇಶ್‌ (32) ಕ್ಯಾಟರಿಂಗ್‌ ಕೆಲಸ ಮಾಡಿಕೊಂಡಿದ್ದರು. ಕೆಲವೊಮ್ಮೆ ಕೆಲಸದ ನಿಮಿತ್ತ ಹೊರಗೆ ಹೋದಾಗ 2-3 ದಿನ ಬಿಟ್ಟು ಮನೆಗೆ ಬರುತ್ತಿದ್ದರು. ಎಂದಿನಂತೆ ಕೆಲಸದ ಬಗ್ಗೆ ಹೊರಗೆ ಹೋದವರು ಜೂ.18ರ ರಾತ್ರಿ 9:30 ಗಂಟೆಗೆ ಮನೆಗೆ ಬಂದಿದ್ದು, ಜೂ.19 ರಂದು ಬೆಳಿಗ್ಗೆ 8:30 ಗಂಟೆ ಸಮಯದವರೆಗೂ ರೂಮ್‌ನಿಂದ ಹೊರಗೇ ಬರದೇ ಇರುವುದನ್ನು ನೋಡಿ ಅವರ ತಂದೆ ರಮೇಶ್‌ ರವರು ಬಾಗಿಲು ಬಡಿದಾಗ ಪ್ರತಿಕ್ರಿಯೆ ಬಾರದಿದ್ದನ್ನು ಕಂಡು ನೆರೆಮನೆಯವರಾದ ವಿಜಯ್‌ ಹಾಗೂ ಸಂಬಂಧಿಕರಾದ ಉಮೇಶ್‌ ರವರನ್ನು ಮನೆಗೆ ಕರೆಯಿಸಿ, ರೂಮಿನ ಹಿಂಬದಿಯಲ್ಲಿನ ಕಿಟಕಿ ಗ್ಲಾಸ್‌ ಅನ್ನು ಹೊಡೆದು ಕೋಲು ಹಾಕಿ ರೂಮ್‌ ಬಾಗಿಲ ಚಿಲಕವನ್ನು ತೆಗೆದು ರೂಮ್‌ ಒಳಗೆ ಹೋಗಿ ನೋಡುವಾಗ ರಾಕೇಶ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20 Jun 2025, 03:21 PM
Category: Kaup
Tags: