ಶಿರ್ವ ಸಹಕಾರಿ ವ್ಯವಸಾಯಿಕ ಸಂಘ : ವನಮಹೋತ್ಸವ ಆಚರಣೆ
Thumbnail
ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘ (ನಿ.) ಶಿರ್ವ ವತಿಯಿಂದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು ಇಲ್ಲಿ ಅಂತರಾಷ್ಟ್ರೀಯ ಸಹಕಾರಿ ವರ್ಷ - 2025 ನ್ನು ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. "ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು" ಎನ್ನುವ ವಿಶ್ವಾಸದೊಂದಿಗೆ ಏಕ್ ಪೇಡ್ ಮಾ ಕೆ ನಾಮ್ ಎನ್ನುವ ಪರಿಕಲ್ಪನೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವನಮಹೋತ್ಸವದ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ವಿವಿಧ ಹಣ್ಣುಗಳ ಸಸಿಗಳನ್ನು ವಿತರಿಸಲಾಯಿತು. ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷರಾದ ವೀರೇಂದ್ರ ಪಾಟ್ಕರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯಿನಿ ಶರ್ಮಿಳಾ, ಎಸ್ ಸಿ ಡಿ‌‌‌ ಸಿ ಸಿ ಬ್ಯಾಂಕ್ ಪ್ರತಿನಿಧಿಯವರಾದ ಬಾಲಗೋಪಾಲ ಬಲ್ಲಾಳ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಎಲ್ಲಾ ನಿರ್ದೇಶಕರು, ಶಾಲಾ ಅಧ್ಯಾಪಕ ವೃಂದದವರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
28 Jun 2025, 10:52 PM
Category: Kaup
Tags: