ಕಾಪು ತಾಲ್ಲೂಕು ಕ.ಸಾ.ಪ. : ವಿದ್ಯಾರ್ಥಿಗಳಿಗೆ ಅಭಿನಂದನೆ, ಭಾಷಣ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
Thumbnail
ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲ್ಲೂಕು ಘಟಕ ವತಿಯಿಂದ 2024-25 ಸಾಲಿನ ಎಸ್ಎಸ್ಎಲ್ ಸಿ ಮತ್ತು ಪದವಿ ಪೂರ್ವ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಕಾಪು ತಾಲ್ಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಅಭಿನಂದನೆ ಹಾಗೂ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಭಾಷಣ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಕಾಪು ತಾಲ್ಲೂಕು ವ್ಯಾಪ್ತಿಯಲ್ಲಿ ಶೇ.100ಫಲಿತಾಂಶ ದಾಖಲಿಸಿದ ಪಲಿಮಾರು ಸ.ಪ.ಪೂ.ಕಾಲೇಜು ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್ ಇವರಿಗೆ ಅಭಿನಂದನೆ ಕಾರ್ಯಕ್ರಮ ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಶಾಲೆಯೆಂಬ ಅರಿವಿನ ಬಾಗಿಲನ್ನು ತೆರೆದಾಗ ಜ್ಞಾನವನ್ನು ಪಡೆಯಬಹುದು. ಭಾಷಾ ಜ್ಞಾನದೊಂದಿಗೆ ಕಲಿಕೆಯ ಬಗ್ಗೆ ಆಸಕ್ತಿ ವಹಿಸಿದಾಗ ಮಾತ್ರ ಉನ್ನತ ಗುರಿ ತಲುಪಲು ಸಾಧ್ಯ ಎಂದರು. ಬಹುಮಾನ ವಿತರಣೆ/ ಅಭಿನಂದನೆ : ಭಾಷಣ ಸ್ಪರ್ಧೆಯಲ್ಲಿ ಸಮಥ್೯ ಜೋಶಿ ದಂಡತೀರ್ಥ ಪ.ಪೂ.ಕಾಲೇಜು ಕಾಪು ಪ್ರಥಮ, ಕೀರ್ತಿ ಆನಂದ ತೀರ್ಥ ಪ.ಪೂ. ಕಾಲೇಜು ಪಾಜಕ ದ್ವಿತೀಯ, ಬೇಬಿ ಒ ಜೈನ್ ಪೂರ್ಣಪ್ರಜ್ಞ ಪ‌.ಪೂ . ಕಾಲೇಜು ಅದಮಾರು ತೃತೀಯ ಮತ್ತು ನಿಧಿ ಅನಿತಾ ಸುರೇಶ್ ಶೆಟ್ಟಿ ಪ.ಪೂ.ಕಾಲೇಜು ‌ಎರ್ಮಾಳ್ , ವಸುಪ್ರದಾ ತ್ರಿಶಾ ವಿದ್ಯಾ ಕಾಲೇಜು ಸಮಾಧಾನಕರ ಬಹುಮಾನ ಪಡೆದರು. ಶೇ.100 ಫಲಿತಾಂಶ ದಾಖಲಿಸಿದ ಪಲಿಮಾರು ಸ.ಪ.ಪೂ.ಕಾಲೇಜು ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್ ಇವರಿಗೆ ಅಭಿನಂದನೆ ಕಾರ್ಯಕ್ರಮ ಜರಗಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಟಪಾಡಿ ತ್ರಿಶಾ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಹರಿಪ್ರಸಾದ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿದರು. ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೀಲಾನಂದ ನಾಯ್ಕ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಕೃಷ್ಣ ಕುಮಾರ್ ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು.ವಿದ್ಯಾಧರ್ ಪುರಾಣಿಕ್ ನಿರೂಪಿಸಿ, ಅನಂತ ಮೂಡಿತ್ತಾಯ ವಂದಿಸಿದರು.
Additional image Additional image Additional image
14 Jul 2025, 07:54 PM
Category: Kaup
Tags: