ಕಾಪು ಯುವವಾಹಿನಿ ಘಟಕದ ವತಿಯಿಂದ ಆಟಿಡೊಂಜಿ ದಿನ -2025 ಕಾರ್ಯಕ್ರಮ
ಕಾಪು : ಆಟಿ ಆಚರಣೆಗಳು ಕರಾವಳಿಯ ಗತ ಅಸ್ತಿತ್ವದ ಜೊತೆಗೆ ಆರೋಗ್ಯದ ಬಗೆಗೂ ಗಮನ ನೀಡುವಂತೆ ನಮಗೆ ಪ್ರೇರೇಪಿಸುತ್ತದೆ. ಆಟಿಯ ಬಗ್ಗೆ ಕಿರಿಯರಿಗೆ ಹಿರಿಯರು ತಿಳಿ ಹೇಳುವ ಮೂಲಕ ನಾವು ಆಟಿ ಆಚರಣೆಗೆ ಮಹತ್ವ ನೀಡಬೇಕಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಲೋಕೇಶ್ ಪೂಜಾರಿ ಹೇಳಿದರು.
ಅವರು ಕಾಪು ಯುವವಾಹಿನಿ ಘಟಕದ ವತಿಯಿಂದ ನಡೆದ ಆಟಿಡೊಂಜಿ ದಿನ -2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉದ್ಯಮಿ ಪ್ರಭಾಕರ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಕೋಶಾಧಿಕಾರಿ ಸುನೀಲ್ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಸಮಾಜದ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾಪು ಘಟಕದ ಅಧ್ಯಕ್ಷ ಸೂರ್ಯನಾರಾಯಣ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.
ಸೂರ್ಯನಾರಾಯಣ ಸುವರ್ಣ ಸ್ವಾಗತಿಸಿದರು. ದೀಪಕ್ ಕುಮಾರ್ ಎರ್ಮಾಳು ಪ್ರಸ್ತಾವಿಸಿದರು. ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ವಂದಿಸಿದರು.
