ಕಾಪು ದಂಡತೀರ್ಥ ಪ.ಪೂ. ಕಾಲೇಜು : ಪ್ರತಿಭಾನ್ವೇಷಣ ಕಾರ್ಯಕ್ರಮ
Posted On:
26-07-2025 04:45PM
ಕಾಪು : ಇಲ್ಲಿನ ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮವು ಶನಿವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಸಮಾರಂಭವನ್ನು ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಿ ತಮ್ಮ ಕಲಾ ಪ್ರೌಢಿಮೆಯನ್ನು ಅನಾವರಣಗೊಳಿಸಬೇಕು. ಪ್ರಸ್ತುತ ವಿದ್ಯಾರ್ಥಿ ಸಮೂಹ ದುಶ್ಚಟಗಳಲ್ಲಿ ತೊಡಗಿ ತಮ್ಮ ಸುಂದರ ಭವಿಷ್ಯವನ್ನು ನಾಶಪಡಿಸುತ್ತಿರುವುದು ದುಃಖಕರ. ಹಾಗಾಗಿ ವಿದ್ಯಾರ್ಥಿಗಳು ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಜೀವನದ ಪರಿಪೂರ್ಣತೆಯ ಕಡೆಗೆ ಸಾಗಬೇಕೆಂಬ ಸಂದೇಶವನ್ನು ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅವಕಾಶ ಕೊಟ್ಟಾಗ ನೈಜ ಪ್ರತಿಭೆ ಅರಳುತ್ತದೆ. ಶಾಲಾ-ಕಾಲೇಜುಗಳಲ್ಲಿ ಮೂಡಿಬಂದ ಉತ್ತಮ ಚಟುವಟಿಕೆಗಳು ಮುಂದಿನ ದಿನಗಳಲ್ಲಿ ವ್ಯಕ್ತವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಪ್ರಾಂಶುಪಾಲರಾದ ನೀಲಾನಂದ್ ನಾಯ್ಕ್ ಮಾತನಾಡಿದರು.
ಸಮಾರಂಭದಲ್ಲಿ ಆಡಳಿತಮಂಡಳಿಯ ಸದಸ್ಯೆ ಪನ್ನಾ ಪಿ. ಶೆಟ್ಟಿ, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ಉಪಸ್ಥಿತರಿದ್ದರು.
ಕಾಲೇಜು ನಾಯಕ ಚಿರಾಗ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ನುವೈಮಾ ಮತ್ತು ಮಂತಸಾ ನಿರೂಪಿಸಿದರು. ವಿದ್ಯಾರ್ಥಿ ಸಫ್ವಾನ್ ವಂದಿಸಿದರು.