ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಂಗಳೂರು - ಉಡುಪಿ ನಡುವೆ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ಸು ಸಂಚಾರ ಪ್ರಾರಂಭಕ್ಕೆ ಜಯರಾಮ ಆಚಾರ್ಯ ಕಾಪು ಆಗ್ರಹ

Posted On: 29-07-2025 09:20AM

ಕಾಪು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಂಗಳೂರು ಮತ್ತು ಉಡುಪಿ ನಡುವೆ (ಪರಿಸರ ಸ್ನೇಹಿ)ಎಲೆಕ್ಟ್ರಿಕ್ ಬಸ್ಸು ಸಂಚಾರ ಪ್ರಾರಂಭಿಸಲು ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ ಕಾಪು ಆಗ್ರಹಿಸಿದ್ದಾರೆ.

45 ಆಸನಗಳು ಮತ್ತು 60-70 ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ಹೊಂದಿರುವ ಆರಾಮದಾಯಕ ಎಲೆಕ್ಟ್ರಿಕ್ ಬಸ್ (ಹವಾನಿಯಂತ್ರಿತ) ಪರಿಸರ ಸ್ನೇಹಿ ಮಂಗಳೂರು ಡಿಪೋದಲ್ಲಿ ಲಭ್ಯವಿದ್ದು, ಉಡುಪಿ ಮತ್ತು ಮಂಗಳೂರು ಮದ್ಯೆ ಓಡಾಟ ಪ್ರಾರಂಭಿಸಬೇಕು.

ಒಟ್ಟು 55 ಕಿಮೀ ದೂರವಿದ್ದು, ಪ್ರಮುಖ ನಿಲ್ದಾಣಗಳಲ್ಲಿ ಈ ಹಿಂದೆ ವೊಲ್ವಾ ಬಸ್ಸು ನಿಲುಗಡೆ ಇದ್ದ ಹಾಗೆ ನಿಲುಗಡೆ ನೀಡಬೇಕು. ಇದರಿಂದ ಮಂಗಳೂರು ಮತ್ತು ಉಡುಪಿ ನಡುವಿನ ದೈನಂದಿನ ಪ್ರಯಾಣಿಕರಿಗೆ, ಸಾರ್ವಜನಿಕರಿಗೂ, ಹೆಚ್ಚು ಅನುಕೂಲವಾಗಲಿದೆ.

ಈ ಬಗ್ಗೆ ಸಮಾಜಸೇವಕರಾದ ಕಾಪು ಜಯರಾಮ ಆಚಾರ್ಯರವರು ಕರ್ನಾಟಕ ಸರಕಾರದ ಟ್ರಾನ್ಸ್ಪೋರ್ಟ್ ಮತ್ತು ಮುಜುರಾಯಿ ಇಲಾಖೆ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ವಿನಂತಿಸಿದ್ದಾರೆ.