ಕಾಪು ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಲಿ : ವಿನಯ ಕುಮಾರ್ ಸೊರಕೆ
Posted On:
29-07-2025 09:28AM
ಕಾಪು : ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಕಾಪು ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದರು.
ಅವರು ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ ನಮಗೆ ದಾರಿ ತೋರಿಸಿ ಕೊಟ್ಟಿದ್ದರು. ಅವರು ನೀಡಿದ ಅವಕಾಶವನ್ನು ಬಳಸಿಕೊಂಡು ನಾವು ಕೂಡಾ ಪ್ರತಿಭಟನೆ ನಡೆಸಿದ್ದೇವೆ. ಜನರ ಮುಂದೆ ಸತ್ಯದರ್ಶನ ಮಾಡಿಸಿಕೊಟ್ಟಿದ್ದೇವೆ ಎಂದರು.
ಕಾಪು ಶಾಸಕರು ರಾಜ್ಯ ಸರಕಾರವು ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅವರಿಗೆ ಶಾಸಕರ ನಿಧಿ, ಅಲ್ಪಸಂಖ್ಯಾತರ ನಿಧಿ, ಲೋಕೋಪಯೋಗಿ ಇಲಾಖೆ ಸಹಿತ ಇತರ ಇಲಾಖೆಗಳ ಅನುದಾನ ಹಾಗೂ ತಾ.ಪಂ., ಜಿ. ಪಂ., ನಿಧಿಯೂ ಸಿಕ್ಕಿದೆ. ಆದರೂ ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಸೊರಕೆ ಹೇಳಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಕಾಪು ದಿವಾಕರ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಜಿತೇಂದ್ರ ಪುರ್ಟಾಡೋ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್, ಶರ್ಪುದ್ದೀನ್ ಶೇಖ್ ಉಪಸ್ಥಿತರಿದ್ದರು.