ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಾಲೂಕಿನಾದ್ಯಂತ ಸಂಭ್ರಮದ ನಾಗರಪಂಚಮಿ ಆಚರಣೆ

Posted On: 29-07-2025 03:29PM

ಕಾಪು : ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ಕಾಪು ತಾಲೂಕಿನಾದ್ಯಂತ ಭಕ್ತರು ತಮ್ಮ ಮೂಲ ನಾಗಬನಗಳಿಗೆ ಭೇಟಿಯಿತ್ತು, ತನು ತಂಬಿಲಾದಿ ಸೇವೆ ನೀಡಿ ಸಂಭ್ರಮದಿಂದ ಆಚರಿಸಿದರು.

ಕಾಪು ತಾಲೂಕಿನ ಹೆಜಮಾಡಿ, ಪಡುಬಿದ್ರಿ, ಎಲ್ಲೂರು, ಉಚ್ಚಿಲ, ಶಿರ್ವ, ಕಾಪು ಸೇರಿದಂತೆ ವಿವಿದೆಡೆ ನಾಗರ ಪಂಚಮಿಯನ್ನು ವಿಶೇಷವಾಗಿ ಆಚರಿಸಲಾಯಿತು.

ಹಾಲು, ಹೂ, ಸಿಯಾಳ, ಅರಶಿನ ವ್ಯಾಪಾರ ಭರ್ಜರಿಯಾಗಿದ್ದು, ಮಳೆ ಇಲ್ಲದ ಕಾರಣ ಹೆಚ್ಚಿನ ಜನರು ನಾಗಬನಗಳಿಗೆ ಭೇಟಿ ನೀಡಲು ಉಪಯುಕ್ತವಾಯಿತು. ವಾಹನ ಸಂಚಾರ ಹೇರಳವಾಗಿತ್ತು. ಬೆಳಗ್ಗಿನ ಹೊತ್ತು ಪಡುಬಿದ್ರಿ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಸ್ವಲ್ಪ ಕಾಲ ಉಂಟಾಗಿತ್ತು.