ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Posted On: 29-07-2025 09:13PM

ಎರ್ಮಾಳು : ಜನ ಕಲ್ಯಾಣಕ್ಕೆ ಪೂರಕವಾದ ಸೇವೆಯನ್ನು ಜನಾರ್ಧನ ಜನ ಕಲ್ಯಾಣ ಸಮಿತಿ ಮಾಡುತ್ತಿದೆ. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕವಾಗಿ ಸಮಾಜದ ಋಣ ತೀರಿಸುವ ಕಾರ್ಯ ಸಮಿತಿ ಮಾಡುತ್ತಿದೆ ಎಂದು ಎರ್ಮಾಳು ಜನಾರ್ಧನ ದೇವಳದ ಅರ್ಚಕರಾದ ವಿಷ್ಣುಮೂರ್ತಿ ಭಟ್ ಹೇಳಿದರು. ಅವರು ಮಂಗಳವಾರ ಜನಾರ್ಧನ ಜನಕಲ್ಯಾಣ ಸೇವಾ ಸಭಾಂಗಣದಲ್ಲಿ ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ (ರಿ.) ಎರ್ಮಾಳು ವತಿಯಿಂದ 2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿದರು. ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಜಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಋಣಾತ್ಮಕವನ್ನು ಯೋಚಿಸದೆ ಧನಾತ್ಮಕ ಚಿಂತನೆಯ ಮೂಲಕ ಜೀವನದಲ್ಲಿ ಮುಂದೆ ಬರಬೇಕು ಎಂದು  ಹೇಳಿದರು.

 ಸಿ.ಎ.ಪರೀಕ್ಷೆಯಲ್ಲಿ ತೇರ್ಗಡೆಯಾದ ಅನುಷಾ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.   2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ 100 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ಎಲ್ಯದಡಿ, ಶಶಿಧರ ಶೆಟ್ಟಿ, ಯಶೋಧರ ಶೆಟ್ಟಿ, ಜ್ಯೋತಿ ಶೆಟ್ಟಿ,  ಸಂತೋಷ್ ಶೆಟ್ಟಿ ಬರ್ಪಾಣಿ,  ರಾಕೇಶ್ ಎಲ್ ಶೆಟ್ಟಿ, ತೆಂಕ ಗ್ರಾ.ಪಂ ಅಧ್ಯಕ್ಷೆ ಸುರೇಖ, ಸಮಿತಿಯ ಟ್ರಸ್ಟಿಗಳು ಉಪಸ್ಥಿತರಿದ್ದರು. ಅಮೃತ ಪ್ರಾರ್ಥಿಸಿದರು. ಸುರೇಶ್ ಜಿ ಶೆಟ್ಟಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿದರು. ಓಂಕಾರ್ ಕಲಾ ಸಂಗಮ ಪಡುಬಿದ್ರಿ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಿತು.