ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ : ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ
Posted On:
01-08-2025 07:33PM
ಕಾಪು : ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಶುಕ್ರವಾರ ಬೆಳಿಗ್ಗೆ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ಈ ಸಂದರ್ಭದಲ್ಲಿ ದೇವಳದ ಸೇವೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ನವದುರ್ಗಾ ಲೇಖನ ಯಜ್ಞ ಪುಸ್ತಕವನ್ನು ಪಡೆದುಕೊಂಡರು. ತಾನು ಹಾಗೂ ಕುಟುಂಬದ ಎಲ್ಲ ಸದಸ್ಯರು ಈ ಲೇಖನವನ್ನು ಬರೆದು ಶ್ರೀ ಕ್ಷೇತ್ರಕ್ಕೆ ಶಾಶ್ವತ ಪೂಜೆಯೊಂದಿಗೆ ಸಮರ್ಪಿಸಲಿದ್ದೇವೆ ಎಂದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಕೆ.ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.