ಕಾಪು : ಮಂಡೇಡಿ ಶ್ರೀದೇವಿ ಭಜನಾ ಮಂಡಳಿ - ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ
Posted On:
10-08-2025 09:59PM
ಕಾಪು : ಮಂಡೇಡಿ ಶ್ರೀದೇವಿ ಭಜನಾ ಮಂಡಳಿ ವತಿಯಿಂದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಮಂಡೇಡಿ ಗ್ರಾಮದ ದೇರೆಕ್ಯಾರ್ ಮನೆ ದಿ. ವಿಠಲ ಶೆಟ್ಟಿ ಸ್ಮರಣಾರ್ಥ ಅವರ ಪುತ್ರ ದಯಾನಂದ ವಿ. ಶೆಟ್ಟಿಯವರ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ಎಲ್ಲಾ ಮಕ್ಕಳಿಗೆ ಪೋತ್ಸಾಹ ಧನ ನೀಡಿ ಗೌರವಿಸಲಾಯಿತು.
ಹಾಗೂ ಅವರು ವರಮಹಾಲಕ್ಷ್ಮಿ ಪೂಜೆಯ ಪ್ರಯುಕ್ತ ಅನ್ನಪ್ರಸಾದ ಸೇವೆ ನೀಡಿದರು.
ಈ ಸಂದರ್ಭದಲ್ಲಿ ಊರ ಹಿರಿಯರು, ಗಣ್ಯರು, ಹಾಗೂ ಭಜನಾ ಮಂಡಳಿಯ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.