ಬ್ಲೂ ಫ್ಲಾಗ್ ಮಾನ್ಯತೆ ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಕೊಡುಗೆಯಾಗಲಿದೆ
ಉಡುಪಿಯ ಪಡುಬಿದ್ರೆಯ ಕಡಲ ತೀರ(ಬೀಚ್) ಪ್ರತಿಷ್ಠಿತ ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆ ಪಡೆದಿದೆ.ಈ ಮೂಲಕ ಉಡುಪಿ ಜಿಲ್ಲೆ ಅಂತರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ಗುರುತಿಸಿಕೊಳ್ಳಲು ಸಾಧ್ಯವಾಗಿದೆ. ಕಾಸರಕೋಡಿನಲ್ಲಿರುವ ಇಕೋ ಬೀಚ್ ಹಾಗೂ ಪಡುಬಿದ್ರಿಯ ಬೀಚ್ ಗಳು ತನ್ನ ಮೊದಲ ಪ್ರಯತ್ನದಲ್ಲೇ ಅಂತರಾಷ್ಟ್ರೀಯ ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿದೆ.ಇದು ಜಿಲ್ಲೆಯ ಘನತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರೆ ತಪ್ಪಾಗಲಾರದು.
ಈ ಎರಡೂ ಬೀಚ್ ಗಳಲ್ಲಿ ಪ್ರವಾಸಿಗರು ಕುಳಿತುಕೊಳ್ಳುವ ಆಸನಗಳಿಂಡ ಹಿಡಿದು ಕುಡಿಯುವ ನೀರು, ಮಕ್ಕಳ ಆಟಿಕೆಗಳು, ಜೀವರಕ್ಷಕ ಸಿಬ್ಬಂದಿ ಹಾಗೂ ಮುಖ್ಯವಾಗಿ ಕಡಲತೀರದ ಸ್ವಚ್ಛತೆ ಸೇರಿ ಎಲ್ಲವೂ ಅಚ್ಚುಕಟ್ಟಾಗಿದೆ. ದೇಶದಲ್ಲಿ ಒಟ್ಟಾರೆ ಹನ್ನೆರಡು ಕಡಲ ತೀರಗಳು ಬ್ಲೂ ಫ್ಲಾಗ್ ಮಾನ್ಯತೆ ಪಡೆದಿದ್ದು ಕರ್ನಾಟಕ ಹೊರತುಪಡಿಸಿ ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ, ಗುಜರಾತ್‌ನ ಶಿವರಾಜಪುರ, ಡಿಯುನ ಘೋಗ್ಲಾ,ಬೀಚ್ ಗಳಿಗೆ ಈ ಗೌರವ ದೊರಕಿದೆ.
ಬ್ಲೂ ಫ್ಲಾಗ್ ಬಗ್ಗೆ:
ಕಡಲ ತೀರ (ಬೀಚ್) ಗಳಲ್ಲಿನ ಸ್ವಚ್ಚತೆ, ಪರಿಸರ ಸ್ನೇಹಿ ವಾತಾವರಣ ಮತ್ತಿತರೆ ಅಂಶಗಳನ್ನು ಪರಿಗಣಿಸಿ ಪರಿಸರ ಶಿಕ್ಷಣಕ್ಕಾಗಿ ವೇದಿಕೆ(ಎಫ್.ಇ.ಇ) ಈ ಬ್ಲೂ ಫ್ಲಾಗ್ ಪ್ರಮಾಣ ಪತ್ರ ನೀಡುತ್ತದೆ. ಇಂತಹಾ ಪ್ರಮಾಣಪತ್ರ ಪಡೆದ ಬೀಚ್ ಗಳಲ್ಲಿ ನೀಲಿ ಬಣ್ಣದ ಧ್ವಜವನ್ನು ಆರೋಹಣ ಮಾಡಲಾಗುವುದು. ವಿದೇಶಗಳಲ್ಲಿ ಇಂತಹಾ ಪ್ರಮಾಣಪತ್ರ ಪಡೆದ ಬೀಚ್ ಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹಾಗಾಗಿ ಭಾರತೀಯ ಪ್ರವಾಸೋದ್ಯಮ ಅಭಿವೃದ್ದಿ ದೃಷ್ಟಿಯಿಂದ ಇಂತಹಾ ಪ್ರಮಾಣಪತ್ರ ಪಡೆಯುವುದು ಅತ್ಯಂತ ಪ್ರಮುಖವಾಗಿದೆ.
ಉಡುಪಿ ಜಿಲ್ಲೆಗೆ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೊಡುಗೆ:
ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಬಲಗೊಳ್ಳುವಲ್ಲಿ ಸಂಶಯವಿಲ್ಲ. ಅಂತರಾಷ್ಟ್ರೀಯ ಮಾನ್ಯತೆಯಿಂದ ದೇಶ ವಿದೇಶದ ಜನರು ಇಲ್ಲಿಗೆ ಬರುತ್ತಾರೆ. ಹೀಗಾಗಿ ಅಭಿವೃದ್ಧಿಯ ನಿಟ್ಟಿನಲ್ಲಿ ಹೊಸ ಭಾಷ್ಯ ಬರೆಯಲು ಸಾಧ್ಯವಾಗಬಹುದಾಗಿದೆ. ಮುಂದಿನ ದಿನಗಳಲ್ಲಿ ಕಾಪು, ಮಲ್ಪೆ, ಹೂಡೆ ಬೀಚ್ ಗಳು ಮಾನ್ಯತೆ ಪಡೆಯಲು ಸಹಾಯವಾಗಬಹುದು. ಜನತೆಯು ಈ ಬೀಚ್ ಗಳ ಸ್ವಚ್ಚತೆಯ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗಿದೆ.ಕೇವಲ ಸಕಾ೯ರವನ್ನು ಕಾಯದೆ ಬೀಚ್ ಗಳ ಸ್ವಚ್ಚತೆ ಮಾಡಿದರೆ ಈ ಮಾನ್ಯತೆಗೆ ಮತ್ತಷ್ಟು ಮೆರುಗು ಬರುತ್ತದೆ.
✍️ ರಾಘವೇಂದ್ರ ಪ್ರಭು,ಕವಾ೯ಲು
ಯುವ ಲೇಖಕ
