ಉಡುಪಿ : ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ ಸ್ವಾಮಿಗಳ ಪಟ್ಟಾಭಿಷೇಕ ವರ್ಧಂತಿ ಉತ್ಸವ New
Posted On:
29-08-2025 05:38PM
ಉಡುಪಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾ ಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರ ಪಟ್ಟಾಭಿಷೇಕದ 17ನೇ ವರ್ಧಂತ್ಯುತ್ಸವ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದಲ್ಲಿ ಸೆಪ್ಟೆಂಬರ್ 3, ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಧರ್ಮಸ್ಥಳ ಶ್ರೀ ರಾಮ ಕ್ಷೇತ್ರದ ಉಡುಪಿ ರಾಮ ಸಮಿತಿಯ ಎಜುಕೇಶನಲ್ ಟ್ರಸ್ಟ್ ನ ಗೌರವ ಅಧ್ಯಕ್ಷರು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಕೆ. ರಘುಪತಿ ಭಟ್ ರವರು ಈ ಪಟ್ಟಾಭಿಷೇಕ ವರ್ಧಂತಿ ಉತ್ಸವದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಒಬೂ ಪೂಜಾರಿ ಹಾಗೂ ಬಿ. ಎಸ್. ನಾರಾಯಣ್ ಮತ್ತು ರಘುನಾಥ್ ಉಪಸ್ಥಿತರಿದ್ದರು.