ಪಲಿಮಾರು ಸ.ಪ.ಪೂ.ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಪಲಿಮಾರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಡುಬಿದ್ರಿ ಠಾಣೆಯ ಉಪನಿರೀಕ್ಷಕರಾದ ಸಕ್ತಿವೇಲು, ಶಿಕ್ಷಣ ಪಡೆಯುವ ಹಂತದಲ್ಲಿ ಸಾಧನೆಯ ಕಡೆಗೆ ಗಮನವಿರಬೇಕು.
ಮಕ್ಕಳು ಡ್ರಗ್ಸ್ ಸೇವನೆಗೆ ಬಲಿಯಾಗಬಾರದು. ಖಿನ್ನತೆ, ಆತ್ಮಹತ್ಯೆಗೆ ಶರಣಾಗುವುದರಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತದೆ ಎಂದು ಹೇಳಿದರು.
ಈ ಸಂದರ್ಭ ಪಲಿಮಾರು ಸರಕಾರಿ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಮಾಧವ ಸಾಲ್ಯಾನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಲಿಮಾರು ಒಕ್ಕೂಟದ ಅಧ್ಯಕ್ಷರಾದ ಆಶಾ ಮತ್ತಿತರರು ಉಪಸ್ಥಿತರಿದ್ದರು.
ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಪ್ರಾಂಶುಪಾಲೆ ಗ್ರೆಟ್ಟಾ ಮೊರಸ್ ಸ್ವಾಗತಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಬಿದ್ರಿ ವಲಯ ಮೇಲ್ವಿಚಾರಕರಾದ ಸರಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಸುಶ್ಮಿತಾ ವಂದಿಸಿದರು.
