ರಾ.ಹೆ.ಯ ಗುಂಡಿ ಮುಚ್ಚಿಸಿ : ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ರಿಂದ ಡಿ.ಸಿ.ಗೆ ಮನವಿ
Thumbnail
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ -ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಪಾಯಕಾರಿಯಾದ ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು. ಇದ್ದರಿಂದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳು ನಡೆಯುತ್ತಿದ್ದು. ಈ ಮಾರ್ಗವಾಗಿ ದಿನನಿತ್ಯ ಸಂಚಾರಿಸುವ ಶಾಲಾ -ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಕರ್ನಾಟಕ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಉಡುಪಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು. ಈ ಅಪಾಯಕಾರಿ ಗುಂಡಿಗಳಿಂದ ಎಷ್ಚೋ ಜನರ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುತ್ತಾರೆ. ಮೊನ್ನೆಯಷ್ಟೆ ದ.ಕ ಜಿಲ್ಲೆಯ ಕೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಗುಂಡಿಯಿಂದ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ತನ್ನ ಅಮೂಲ್ಯ ಜೀವ ಕಳೆದು ಕೊಂಡಿರುವುದರಿಂದ, ಈ ಗುಂಡಿಗಳಿಂದ ಇನ್ನಷ್ಟು ಜೀವಗಳು ಕಳೆದು ಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ ಸಂಬಂಧಪಟ್ಟ ಇಲಾಖೆಯವರಿಂದ ತ್ವರಿತಗತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳನ್ನು ಮುಚ್ಚಿಸಿ ಮುಕ್ತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಯವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸುವ ಭರವಸೆ ನೀಡಿದರು.
12 Sep 2025, 02:55 PM
Category: Kaup
Tags: