ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ : ಮಾತೃ ವಂದನಾ ಕಾರ್ಯಕ್ರಮ
Thumbnail
ಕಾಪು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಇಲ್ಲಿ ಮಾತೃ ವಂದನಾ ಕಾರ್ಯಕ್ರಮವು ನಡೆಯಿತು. ಮೌನೇಶ್ ಶರ್ಮಾ ಮಾತೃ ವಂದನಾ ಕಾರ್ಯಕ್ರಮವನ್ನು ನೆರವೇರಿಸಿ, ಅಮ್ಮನ ಮಹತ್ವದ ಬಗ್ಗೆ ಧಾರ್ಮಿಕ ಉಪನ್ಯಾಸವನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ, ಮುಖ್ಯ ಕಾರ್ಯದರ್ಶಿಗಳಾದ ಗುರುರಾಜ್ ಕೆ ಜೆ, ಆಸೆಟ್ ನ ಸದಸ್ಯರಾದ ಸುಂದರ ಆಚಾರ್ಯ ಮರೋಳಿ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ವಿಜಯಲಕ್ಷ್ಮಿ ತಂತ್ರಿ, ಶಾಲಾ ಮಾತೃ ಮಂಡಳಿಯ ಅಧ್ಯಕ್ಷರಾದ ಶೋಭಾ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕರಾದ ಅನಿತಾ, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಮತ್ತು ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಅನಿತಾ ಮಾತಾಜಿ ಸ್ವಾಗತಿಸಿ, ರಶ್ಮಿ ಮಾತಾಜಿ ವಂದಿಸಿ, ರಮ್ಯಾ ಮಾತಾಜಿ ಕಾರ್ಯಕ್ರಮವನ್ನು ನಿರೂಪಿಸಿದರು.
Additional image Additional image Additional image
20 Sep 2025, 09:28 AM
Category: Kaup
Tags: