ಕರಾಟೆಯಲ್ಲಿ ಸಾಣೂರು ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಕು. ಸೃಜನಾ ರಾಜ್ಯಮಟ್ಟಕ್ಕೆ ಆಯ್ಕೆ
Thumbnail
ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಸೃಜನಾ ಆಯ್ಕೆಯಾಗಿದ್ದಾರೆ. ಈಕೆ ಕಾಂತಾವರ ಗ್ರಾಮದ ಬಾರಾಡಿಯ ಜಗದೀಶ್ ಕುಲಾಲ್ ಮತ್ತು ಜ್ಯೋತಿ ಕುಲಾಲ್ ದಂಪತಿಗಳ ಸುಪುತ್ರಿ.
20 Sep 2025, 12:31 PM
Category: Kaup
Tags: