ಶಿರ್ವ : ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ಜರುಗುತ್ತಿರುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಬುಧವಾರ "ಯಕ್ಷ ಪಲ್ಲವಿ" ಚಿಂತನ ಹೆಗಡೆ ಮಾಳಕೋಡ್, ಹೊನ್ನಾವರ ಇವರ ಬಳಗದ ವತಿಯಿಂದ ಜರುಗಿದ "ಯಕ್ಷಗಾನ -ನೃತ್ಯ ವೈಭವ" ಕಾರ್ಯಕ್ರಮದಲ್ಲಿ ಯುವ ಪ್ರತಿಭೆ, ಕಂಚಿನ ಕಂಠದ ಭಾಗವತರಾಗಿ ಮಿಂಚುತ್ತಿರುವ ಚಿಂತನ ಹೆಗಡೆ ಮಾಳಕೋಡ್ ಇವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಜಯರಾಮ ಪ್ರಭು ಗಂಪದಬೈಲು, ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ಪ್ರಾಯೋಜಕತ್ವ ವಹಿಸಿದ ರಾಜಾಪುರ ಸಾರಸ್ವತ ಸೇವಾ ವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್, ಕಾರ್ಯದರ್ಶಿ ವಿಶ್ವನಾಥ ಬಾಂದೇಲ್ಕರ್, ಉದ್ಯಮಿ ರಾಮಚಂದ್ರ ನಾಯಕ್ ಪಡುಬೆಳ್ಳೆ, ಸೇವಾ ವೃಂದದ ಪದಾಧಿಕಾರಿಗಳಾದ ಅನಂತರಾಮ ವಾಗ್ಲೆ, ರಾಘವೇಂದ್ರ ನಾಯಕ್ ಪಾಲಮೆ ಉಪಸ್ಥಿತರಿದ್ದರು.