ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀ ಶರನ್ನವರಾತ್ರಿ ಪ್ರಯುಕ್ತ ಮಹಾ ಚಂಡಿಕಾಯಾಗ ಸಂಪನ್ನ New

Posted On: 30-09-2025 05:30PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಮಂಗಳವಾರ ಮಹಾ ಚಂಡಿಕಾಯಾಗ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು.

ಕಳೆದ ಒಂಬತ್ತು ದಿನಗಳ ಪರ್ಯಂತ ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಶ್ರೀ ಕೆ.ಪಿ. ಕುಮಾರಗುರು ತಂತ್ರಿಗಳ ಹಾಗೂ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಇವರ ಸಹಯೋಗದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಪ್ರತಿದಿನ ಸಂಜೆ ಗಂಟೆ 05:30 ರಿಂದ 07.00 ರವರೆಗೆ ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ. ಸಂಜೆ ಗಂಟೆ 7ರಿಂದ ಸಾಂಸ್ಕೃತಿಕ ವೈಭವದ ಮೆರುಗನ್ನು ನೀಡಲು ಸಂಗೀತ, ನೃತ್ಯ, ನಾಟಕ, ಯಕ್ಷಗಾನ ಪ್ರದರ್ಶನ ನಡೆಯಿತು.

ಅಕ್ಟೋಬರ್ 1ರಂದು ಬೆಳಿಗ್ಗೆ 8ರಿಂದ ಗಂಟೆಯಿಂದ ನವದುರ್ಗಾ ಲೇಖನ ಸಂಕಲ್ಪ, ಪುಸ್ತಕಸ್ಥ ವಾಗ್ಗೇವತಾಪೂಜನಮ್ ನಡೆಯಲಿದ್ದು, ಈಗಾಗಲೇ ಪುಸ್ತಕ ಬರೆದವರು ಈ ಪೂಜೆಯಲ್ಲಿ ಭಾಗಿಯಾಗಬಹುದು.

ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ,ಮತ್ತು ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಯೋಗೀಶ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.