ಅ.14 : ಕಾಪುವಿನಲ್ಲಿ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಸಂಸ್ಮರಣೆ
ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ನೇತೃತ್ವ ಮತ್ತು ಸಾಹಿತ್ಯ ಸಂಘ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇದರ ಸಹಭಾಗಿತ್ವದಲ್ಲಿ ಕನ್ನಡ ಸಾರಸ್ವತ ಲೋಕದ ದಿಗ್ಗಜ, ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮಭೂಷಣ ಡಾ.ಎಸ್.ಎಲ್.ಭೈರಪ್ಪರವರ ಸಂಸ್ಮರಣಾ ಕಾರ್ಯಕ್ರಮ ಅ.14 ಮಂಗಳವಾರ ಅಪರಾಹ್ನ 1:15ಕ್ಕೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರುಗಲಿದೆ.
ಉಡುಪಿ ಎಂ.ಜಿ.ಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥರಾದ ಪ್ರೊ.ಸುರೇಂದ್ರನಾಥ್ ಶೆಟ್ಟಿ ನುಡಿನಮನ ಸಲ್ಲಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಚಾರ್ಯರಾದ ಡಾ.ಗೋಪಾಲಕೃಷ್ಣ ಎಂ.ಗಾಂವ್ಕರ್, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಭಾಗವಹಿಸುವರು.
ಸಭಾಧ್ಯಕ್ಷತೆಯನ್ನು ಕಸಾಪ ಕಾಪು ತಾಲೂಕು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸುವರು ಎಂದು ಸಂಘಟಕರ ಪ್ರಕಟನೆ ತಿಳಿಸಿದೆ.
