ಕಾಪು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಪುಸ್ತಕ ಮಳಿಗೆ, ವಸ್ತುಪ್ರದರ್ಶನಕ್ಕೆ ಅವಕಾಶ
Thumbnail
ಪಡುಬಿದ್ರಿ : ಖ್ಯಾತ ಕಥೆಗಾರ, ಹಿರಿಯ ಸಾಹಿತಿ ಮತ್ತು ಸಾಮಾಜಿಕ ಕಾರ್ಯಕರ್ತರಾದ ಫಕೀರ್ ಮುಹಮ್ಮದ್ ಕಟ್ಪಾಡಿಯವರ ಸರ್ವಾಧ್ಯಕ್ಷತೆಯಲ್ಲಿ ನ. 15ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾ ಭವನದಲ್ಲಿ ಜರಗಲಿರುವ ಕಾಪು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭ ಪುಸ್ತಕ ಮಳಿಗೆ, ಚಿತ್ರಕಲಾ ಪ್ರದರ್ಶನ, ವಸ್ತು ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕಾಪು ತಾಲ್ಲೂಕು ವ್ಯಾಪ್ತಿಯ ಲೇಖಕರು 2025ನೇ ಸಾಲಿನಲ್ಲಿ ರಚಿಸಿದ ಪುಸ್ತಕಗಳನ್ನು ಬಿಡುಗಡೆ ಮಾಡುವ ಬಗ್ಗೆಯೂ ಅವಕಾಶ ಇದೆ. ಹೆಚ್ಚಿನ ಮಾಹಿತಿಗೆ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ [9620382173] ಅವರನ್ನು ಸಂಪರ್ಕಿಸಬಹುದು.
31 Oct 2025, 11:16 PM
Category: Kaup
Tags: