ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆ : ಕನ್ನಡ ರಾಜ್ಯೋತ್ಸವ ಆಚರಣೆ
Thumbnail
ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ ಇವರು ಧ್ವಜಾರೋಹಣ ನೆರವೇರಿಸಿ, ಕನ್ನಡದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತ ವಾಗಿರದೆ ಬದುಕಿನ ಎಲ್ಲ ಸಮಯಗಳಲ್ಲಿ ಒಂದಾಗಿ ಆಯೋಜಿಸುವಂತಾಗಬೇಕು ಎಂಬ ಸಂದೇಶ ನೀಡಿದರು. ಸಮಾರಂಭದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನ್ಹಸ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕೃಪಾ ಅಮ್ಮನ್ನ, ಶಿಕ್ಷಕ ಪ್ರಭಾಕರ್ ಶೆಟ್ಟಿ, ಶಿಕ್ಷಕ - ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
01 Nov 2025, 06:45 PM
Category: Kaup
Tags: