ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಬಾವಿ ಸಭೆ ಡಿಸೆಂಬರ್ 13ರ ಶನಿವಾರ ನ ಡೆಯಿತು, 3 ದಿನಗಳ ಕಾಲ ಕಾಪು ಸಮುದ್ರ ಕಿನಾರೆಯಲ್ಲಿ ನಡೆಯುವ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಆಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ನಡೆಯಲ್ಲಿದ್ದು ಖ್ಯಾತ ಗಾಯಕ ರಘು ದೀಕ್ಷಿತ್, ಕುನಾಲ್ ಗಾಂಜಾವಾಲ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜ ಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿ ತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
