ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ
Thumbnail

ಕಾಪು : ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುರುಡಾಯಿ ಕೆರೆ ಅಭಿವೃದ್ದಿ ಸಮಿತಿ  ಸಹಭಾಗಿತ್ವದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುಡಾಯಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಹತ್ವಾಕಾಂಕ್ಷೆಯ ಯೋಜನೆ 847ನೆ ನಮ್ಮೂರು ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮ ನೆರವೇರಿತು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕರಾವಳಿ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಆನಂದ ಸುವರ್ಣರವರು ಕೆರೆ ನಾಮಫಲಕ ಅನಾವರಣವನ್ನು  ನೆರವೇರಿಸಿದರು.

ಕಾಪು ತಾಲೂಕು ದಂಡಾಧಿಕಾರಿ, ತಹಶೀಲ್ದಾರ್ ಅನಂತ ಶಂಕರ್ ಹಾಗೂ ಊರಿನ ಗಣ್ಯರು ಕೆರೆಗೆ ಬಾಗಿನ ಅರ್ಪಿಸಿದರು.  

  ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ” ಯೋಜನೆಯಿಂದ ಗ್ರಾಮಗಳ ಕೆರೆ ಅಭಿವೃದ್ಧಿ ಆಗುತ್ತಿದೆ.  ಕೆರೆ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಾಬ್ದಾರಿ. ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ, ಪಕ್ಷಿ ಮತ್ತು ಮನುಷ್ಯರಿಗೆ ಅನುಕೂಲವಾಗುತ್ತಿದೆ.  ಮುಂದಿನ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪದ್ಮ ವಿಭೂಷಣ ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ಕೆರೆ ಸಂರಕ್ಷಣೆಯ ಮೂಲಕ ರಾಜ್ಯದಲ್ಲಿ ಈಗಾಗಲೇ 1000 ಕೆರೆಗಳ ಕಾಮಗಾರಿ ಮಾಡಿ, ಪುನಶೇತ್ವನ ಗೊಳಿಸಲಾಗಿದೆ. ಇದು ರಾಜ್ಯದಲ್ಲಿ ಕೆರೆಗಳ ಸಂರಕ್ಷಣೆಗೆ ಆದ್ಯತೆ  ಪೂರ್ಣಗೊಂಡಿರುತ್ತವೆ. ರೈತ ಬಾಂಧವರು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.  

  ತಾಲೂಕು ದಂಡಾಧಿಕಾರಿ ಅನಂತ ಶಂಕರ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಊರಿನ ಕೆರೆ, ಸಮುದಾಯ ಭವನ, ಹಿಂದೂ ರುದ್ರಭೂಮಿ, ಶಿಷ್ಯ ವೇತನ ಮಹತ್ತರ ಕೆಲಸ ಮಾಡುತ್ತಿದೆ. ಮುಂದೆಯೂ ನಿರಂತರವಾಗಿ ಸಮಾಜ ಸೇವೆ ಮುಂದುವರಿಯಲಿ ಎಂದು ಶ್ಲಾಘಿಸಿದರು.

ಬೆಳ್ಳೆ ಕುರುಡಾಯಿ ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಬೆಳ್ಳೆ ಪಂಚಾಯತ್ ಅಧ್ಯಕ್ಷರಾದ ದಿವ್ಯ ಆಚಾರ್ಯ, ಉಪಾಧ್ಯಕ್ಷರಾದ ಶಶಿಧರ ವಾಗ್ಲೆ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಇನ್ನಾ ಉದಯ ಕುಮಾರ್ ಶೆಟ್ಟಿ, ಸುಜಾತ ಸುವರ್ಣ, ಗೀತಾ ವಾಗ್ಲೆ, ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ರಾಜ್ಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಕೇಂದ್ರ ಒಕ್ಕೂಟ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸ್ಯಾಮ್ಸನ್, ಶೌರ್ಯವಿಪತ್ತು ನಿರ್ವಹಣಾ ಸದಸ್ಯರು, ಸಂಘದ ಸದಸ್ಯರು, ಗ್ರಾಮದ ಗಣ್ಯರು, ಮಾದ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕೆರೆ ಅಭಿವೃದ್ದಿ ಸಮಿತಿ ಸದಸ್ಯರನ್ನು ಪ್ರಾದೇಶಿಕ ನಿರ್ದೇಶಕರು ಗೌರವಾರ್ಪಣೆ ಮಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಮತಾ ಶೆಟ್ಟಿ ಪ್ರಸ್ತಾವನೆಗೈದು, ಸ್ವಾಗತಿಸಿದರು. 
ಶಿರ್ವ ವಲಯ ಮೇಲ್ವಿಚಾರಕರಾದ ಗೀತಾ  ನಿರೂಪಿಸಿದರು. ದೇವೇಂದ್ರ ವಂದಿಸಿದರು.

Additional image
18 Dec 2025, 06:29 PM
Category: Kaup
Tags: