ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮ ಅವಿಸ್ಮರಣೀಯ : ಬಿ.ವೈ.ವಿಜಯೇಂದ್ರ
Thumbnail

ಕಾಪು : ಅಪ್ರತಿಮ ದೇಶ ಭಕ್ತ ಅಟಲ್ ಬಿಹಾರಿ  ವಾಜಪೇಯಿಯವರ ದೂರದರ್ಶಿತ್ವ ನಾಯಕತ್ವ ಸರ್ವರಿಗೂ ಮಾರ್ಗದರ್ಶಿಯಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಕಾಯಕಲ್ಪ ನೀಡಿದ ದೇಶದ ಜನ ಸೇವಕ. ಕಾಪು ಕಡಲ ತೀರದಲ್ಲಿ ಅಟಲ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮ ಅವಿಸ್ಮರಣೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಅವರು ಅವರು ಶನಿವಾರ ಕಾಪು ದೀಪಸ್ತಂಭದ ಬಳಿ ಕಡಲ ಕಿನಾರೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೇ ದಿನದ ಕಾಪು ಕಡಲ ಪರ್ಬದ ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಸ್ಮರಣೆಯ ದಿ. ಲೀಲಾಧರ ಶೆಟ್ಟಿ. ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭ ಪಕ್ಷ ಸಂಘಟನೆಗಾಗಿ 

ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ, ಸೋಮಶೇಖರ್ ಭಟ್ ರ ಶ್ರಮವನ್ನು ಸ್ಮರಿಸಿದರು.

 

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ, ಅದಾನಿ ಗ್ರೂಪ್ ಕಾರ್ಯವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿದರು.

 

ಅಟಲ್ ಸಾಧನಾ ಪ್ರಶಸ್ತಿ : ಕಾಪು ಕಡಲ ಪರ್ಬದ ಗೌರಾವಾಧ್ಯಕ್ಷ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಡಾ. ವಿದ್ಯಾಧರ್ ಎಸ್ ನಾಯಕ್, ಸೂರ್ಯಕಾಂತ್ ಜಯ ಸುವರ್ಣ ಅವರನ್ನು ಅಟಲ್ ಸಾಧನಾ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ಬಿಜೆಪಿ ಹಿರಿಯರನ್ನು ಗುರುತಿಸಿ ಗೌರವಿಸಲಾಯಿತು.

 

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. 

 

ವೇದಿಕೆಯಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರು ಎಂ.ಆರ್.ಜಿ ಗ್ರೂಪ್ ಚೈಯರ್‌ಮ್ಯಾನ್ ಕೆ.ಪ್ರಕಾಶ್ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗಿರಥಿ ಮುರಳೂ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಮಂಜು, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್, ಆಟಲ್ ಜೀ ಶತಮಾನೋತ್ಸವ ಸಮಿತಿಯ - ರಾಜ್ಯ ಸಂಚಾಲಕರಾದ ಜಗದೀಶ್ ಹಿರೇಮನಿ, ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ ಮಹಿಳಾ ವಿಭಾಗ ಉಡುಪಿ ಅಧ್ಯಕ್ಷರಾದ ಗೀತಾಂಜಲಿ ಎಮ್. ಸುವರ್ಣ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣರಾವ್‌, ಶರಣ್ ಕುಮಾರ್ ಮಟ್ಟು, ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಹೋಟೆಲ್ ಉದ್ಯಮಿಗಳಾದ ಸಂತೋಷ್ ಶೆಟ್ಟಿ ಪುಣೆ, ಬರೋಡ ಶಶಿಧರ್ ಶೆಟ್ಟಿ, ಉಪೇಂದ್ರ, ಕುಶ ಸಾಲ್ಯಾನ್, ಸಂದೀಪ್ ಶೆಟ್ಟಿ, ರಾಜರ್ಷಿ ಕೆ. ವಾಸುದೇವ ಶೆಟ್ಟಿ, ನೀತಾಗುರುರಾಜ್, ಸೋನು ಪಾಂಗಾಳ, ಸಂತೋಷ್ ಮೂಡುಬೆಳ್ಳೆ ಮತ್ತಿತರರು ವೇದಿಕೆಯಲ್ಲಿದ್ದರು.

 

ಪ್ರಾಣೇಶ್ ಹೆಜಮಾಡಿ ವಂದೇ ಮಾತರಂ ಹಾಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ವಂದಿಸಿದರು. ಎಲ್ಲೂರು ಗ್ರಾ.ಪಂ. ಮಾಜಿ ಸದಸ್ಯ ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.

 

ನಂತರ ಗಾಯಕ ರಘು ದೀಕ್ಷಿತ್ ರವರಿಂದ  ಸಂಗೀತ ರಸ ಮಂಜರಿ ಕಾರ್ಯಕ್ರಮವು  ನಡೆಯಿತು.

 

28 Dec 2025, 10:54 AM
Category: Kaup
Tags: